ಬೆಂಗಳೂರು : ತೀವ್ರ ಕುತೂಹಲ ಮೂಡಿಸಿರುವ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ರಾಜಭವನ ರಸ್ತೆಯ ಹೋಟೆಲ್ ಕ್ಯಾಪಿಟಲ್‌ನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ನೂತನ ಮುಖ್ಯಮಂತ್ರಿ ಹೆಸರು ಘೋಷಣೆಯಾಗುವ ಸಾಧ್ಯತೆಗಳಿದೆ.
ಕ್ಯಾಪಿಟಲ್ ಹೋಟೆಲ್‌ಗೆ ಕೇಂದ್ರದ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಮತ್ತು ಜಿ ಕಿಶನ್ ರೆಡ್ಡಿ ಆಗಮಿಸಿದ್ದು ಜೊತೆಗೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕೂಡಾ ಪರಿಸ್ಥಿತರಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದಿಯಾಗಿ ಬಿಜೆಪಿಯ ಬಹುತೇಕ ಮಂದಿ ಶಾಸಕರು ಸಭೆಗೆ ಹಾಜರಾಗಿದ್ದಾರೆ.
ಲಿಂಗಾಯತ ಸಮುದಾಯದಕ್ಕೆ ಸೇರಿದ ನಾಯಕನನ್ನೆ ಮುಂದಿನ ಸಿಎಂ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ಸಿಎಂ ರೇಸ್‌ನಲ್ಲಿ ಬಸವರಾಜ್ ಬೊಮ್ಮಾಯಿ ಮತ್ತು ಅರವಿಂದ್ ಬೆಲ್ಲದ್ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಉಭಯ ನಾಯಕರು ಶಾಸಕರಿಗೆ ಕರೆ ಮಾಡಿ ಬೆಂಬಲವನ್ನು ಕೋರುತ್ತಿದ್ದಾರೆ.