- ಮಾನಹಾನಿ ಸುದ್ದಿಗೆ ತಡೆ ಕೋರಿ ಅರ್ಜಿ
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್‍ಬಾಸ್ ರಿಯಾಲಿಟಿ ಶೋ ಸ್ಪರ್ಧಿ ದಿವ್ಯಾ ಉರುಡುಗ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಬೇಕು ಎಂದು ಬಿಗ್ ಬಾಸ್ ಸ್ಪರ್ಧಿ ದಿವ್ಯಾ ಉರುಡುಗ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ಮಾನಹಾನಿಕರ ಸುದ್ದಿ ಮಾಡದಂತೆ ನಿರ್ಬಂಧ ಕೋರಿ ಸಿಟಿ ಸಿವಿಲ್ ಕೋರ್ಟ್ ಗೆ ದಿವ್ಯಾ ಉರಡುಗ ಅರ್ಜಿ ಸಲ್ಲಿಸಿದ್ದಾರೆ. ದಿವ್ಯಾ ಉರುಗಡುಗ ಅವರಿಗೆ ಸಂಬಂಧಿಸಿದ ಖಾಸಗಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಕೊರೊನಾ ಎರಡನೇ ಅಲೆ ಹಿನ್ನೆಲೆ ಬಿಗ್‍ಬಾಸ್ ಎಂಟನೇ ಆವೃತ್ತಿ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಈಗ ಎರಡನೇ ಇನ್ನಿಂಗ್ಸ್ ಅಂತಿಮ ಘಟ್ಟಕ್ಕೆ ತಲುಪಿದೆ. ಬೈಕ್ ರೈಡರ್ ಆಗಿರುವ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಜೋಡಿ ಹೆಚ್ಚು ಸದ್ದು ಮಾಡ್ತಿದೆ.