ಕೊನೆಗೂ ಸಂಪುಟ ಸರ್ಕಸ ಕೊನೆ ಹಂತಕ್ಕೆ ಬಂದಿದ್ದು ಅಂತೂಇಂತೂ ಕ್ಯಾಬಿನೆಟ್ ರಚನೆಗೆ ಮುಹೂರ್ತ ಫಿಕ್ಸ್ ಆಗಿದೆ. ನಾಳೆ 2.15ಕ್ಕೆ ನೂತನ ಸಚಿವರ ಪ್ರಮಾಣ ವಚನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆಯನ್ನು ನೀಡಿದ್ದಾರೆ.
ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆಯನ್ನೂ ನೀಡಿದ್ದು, ಮುಖ್ಯ ಕಾರ್ಯದರ್ಶಿಯವರು ಶಿಷ್ಟಾಚಾರ ವಿಭಾಗಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ನೂತನ ಸಚಿವರ ಪ್ರಮಾಣ ವಚನ ಕುರಿತು ರಾಜ್ಯ ಸರ್ಕಾರ ರಾಜ್ಯಪಾಲರಿಗೂಮಾಹಿತಿ ನೀಡಿದೆ.
ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವಂತಹ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಳಿಗ್ಗೆ 6:10ರ ವಿಮಾನಕ್ಕೆ ಬೆಂಗಳೂರಿಗೆ ಹೊರಡಲಿದ್ದಾರೆ.