ಸಚಿವ ಸ್ಥಾನದ ಅಕಾಂಕ್ಷಿಗಳು ನಾನಾ ಕಸರತ್ತು ನಡೆಸುತ್ತಿದ್ದಾರೆ. ಕೆಲವರು ದೆಹಲಿಯಲ್ಲಿ ಬೀಡು ಬಿಟ್ಟಿದ್ರೆ, ಇನ್ನು ಕೆಲವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಕಚೇರಿಯಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ ಕೆಲ ಶಾಸಕರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಸಚಿವ ಸ್ಥಾನ ಸಿಗಲೆಂದು ದೇವರ ಮೊರೆ ಹೋಗುತ್ತಿದ್ದಾರೆ.
ಹುಬ್ಬಳ್ಳಿಯಲ್ಲಿಯೂ ಸಚಿವ ಸ್ಥಾನಕ್ಕೆ ಲಾಬಿ ಹೆಚ್ಚಾಗಿದ್ದೂ, ಶಾಸಕ ಅರವಿಂದ ಬೆಲ್ಲದ ಅಭಿಮಾನಿಗಳು ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಅರವಿಂದ ಬೆಲ್ಲದ ಅಭಿಮಾನಿಗಳು ದೀರ್ಘ ದಂಡ ನಮಸ್ಕಾರ ಹಾಕಿ, ತಮ್ಮ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಘೋಷಣೆ ಕೂಗಿದ್ದಾರೆ.