ಹೊಸದಿಲ್ಲಿ: ಸಂಸತ್ತಿನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಪಕ್ಷದ ನಾಯಕರನ್ನು ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಪೆಗಾಸಸ್ ಗೂಢಚರ್ಯೆ ಪ್ರಕರಣ ಸಂಬಂಧಿಸಿದಂತೆ ಜಂಟಿ ಕಾರ್ಯತಂತ್ರವನ್ನು ಮಾಡಲಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಮಳೆಗಾಲದ ಅಧಿವೇಶನವು ಪೆಗಾಸಸ್ ವಿಚಾರದಲ್ಲಿ ಪದೆ-ಪದೆ ಗಲಾಟೆ-ಗದ್ದಲಕ್ಕೆ ಬಲಿಯಾಗುತ್ತಿದೆ. ಅಧಿವೇಶನ ನಡೆಯಲು ಪ್ರತಿಪಕ್ಷಗಳು ಬಿಡುತ್ತಿಲ್ಲ ಎಂದು ಸರ್ಕಾರ ಆರೋಪ ಮಾಡುತ್ತಿದೆ. ಆದರೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ ಎಂದು ಪ್ರತಿಪಕ್ಷಗಳು ಹೇಳುತ್ತಿವೆ.
ಏತನ್ಮಧ್ಯೆ, ಪೆಗಾಸಸ್ ಬೇಹುಗಾರಿಕೆ ಪ್ರಕರಣದ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳ ಆಗ್ರಹಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.ದೂರವಾಣಿ ಕದ್ದಾಲಿಕೆಯ ಬಗ್ಗೆ ಬಹಳ ದಿನಗಳಿಂದ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು. ಆರಂಭದ ದಿನದಿಂದಲೇ ನಾನು ಇದನ್ನು ಹೇಳುತ್ತಿದ್ದೇನೆ. ಆದರೆ ಸಂಸತ್ತಿನಲ್ಲಿ ಹೇಳಿಕೆ ನೀಡಿರುವ ಸರಕಾರ, ಯಾವುದೇ ಅಕ್ರಮ ನಡೆಸಿಲ್ಲ ಎಂದು ಹೇಳಿದೆ. ಆದರೆ ಎರಡೂ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಯಲೇಬೇಕು. ತನಿಖೆಯ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.
Breakfast meeting of Shri @RahulGandhi with leaders of various opposition parties today at Constitution Club, New Delhi pic.twitter.com/wQkUjH0a3I
— All India Mahila Congress (@MahilaCongress) August 3, 2021
ಇಷ್ಟೆ ಅಲ್ಲದೆ, ಪೆಗಾಸಸ್ ಗೂಢಚರ್ಯೆ ಪ್ರಕರಣರ್ಖಕ್ಕೆ ಹೊಸ ತಿರುವು ಸಿಕ್ಕಿದ್ದು, ಬೇಹುಗಾರಿಕೆಯ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಹೇಳಲಾದ ಐವರು ಪತ್ರಕರ್ತರು ಕೂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸರ್ಕಾರಿ ಸಂಸ್ಥೆಗಳ ಕಣ್ಗಾವಲಿನ ಮೂಲಕ ನಮ್ಮ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಲಾಗಿದೆ. ಪೆಗಾಸಸ್ ಬಳಕೆಯನ್ನು ಕಾನೂನುಬಾಹಿರ ಎಂದು ಘೋಷಿಸಿ ಎಂದು ಐವರು ಪತ್ರಕರ್ತರು ಸುಪ್ರೀಂ ಕೋರ್ಟ್‌ಗೆ ಬೇಡಿಕೆ ಸಲ್ಲಿಸಿದ್ದಾರೆ. ಈ ಹಿಂದೆ ಈ ಕುರಿತು ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಇವುಗಳ ವಿಚಾರಣೆ ಗುರುವಾರ ನಡೆಯಲಿದೆ.