ರಾಜ್ಯದಲ್ಲಿ ಕೊನೆಗೂ ಸಂಪುಟ ಕಸರತ್ತು ಮುಗಿದಿದ್ದು. ರಾಜ್ಯ ನೂತನ ಸಚಿವರಾಗಿ ನಾಯಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ತಾವರ್‌ಚಂದ್ ಗೆಹ್ಲೋಟ್‌ರವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸುತ್ತಿದ್ದಾರೆ.
ಮೊದಲನೆಯವರಾಗಿ ಗೋವಿಂದ ಕಾರಜೋಳ ಅವರು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇಯವರಾಗಿ ಕೆ.ಎಸ್.ಈಶ್ವರಪ್ಪ ದೇವರ ಹೆಸರಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಈಶ್ವರಪ್ಪ ನಂತರ ಆರ್.ಅಶೋಕ್ ಪ್ರಮಾಣವಚನ ಸ್ವೀಕರಿಸಿದರು. ಡಿಸಿಎಂ ಹುದ್ದೆ ಮೇಲೆ ಕಣ್ಣೀಟ್ಟಿದ್ದ ಶ್ರೀರಾಮುಲು ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿ ಸೋಮ್ಮಣ್ಣ ಹಾಗೂ ಹುಕ್ಕೇರಿ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಜೆ.ಸಿ.ಮಾಧುಸ್ವಾಮಿ, 4 ಬಾರಿ ಶಾಸಕರಾಗಿದ್ದ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಡಿಸಿಎಂ ಆಗಿ ಕಾರ್ಯನಿರ್ವಹಿಸಿದ್ದ ಮಲ್ಲೇಶ್ವರ ಶಾಸಕರಾದ ಅಶ್ವತ್ಥ್ ನಾರಾಯಣ ಅವರು ಪ್ರಮಾಣವಚನ ಸ್ವೀಕರಿಸಿದರು.
ಗದಗ ಜಿಲ್ಲೆಯ ನರಗುಂದ ಕ್ಷೇತ್ರದ ಶಾಸಕ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಔರಾದ್ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚೌಹಾಣ್ ಗೋಮಾತೆಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.