ನವದೆಹಲಿ : ಕ್ರಿಮಿನಲ್ ಹಿನ್ನೆಲೆಯುಳ್ಳ ಅಭ್ಯರ್ಥಿಗಳ ವಿವರಗಳನ್ನು ತಮ್ಮ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿದ ಹಿನ್ನಲೆ ಎಂಟು ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ದಂಡ ವಿಧಿಸಿದೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆ ಬಹಿರಂಗಪಡಿಸುವುದಕ್ಕೆ ಸೂಚನೆ ನೀಡಿತ್ತು. ಇದರ ಉಲ್ಲಂಘನೆ ಹಿನ್ನಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 6 ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ರಾಷ್ಟ್ರೀಯ ಜನತಾದಳ (ಆರ್‌ಜೆಡಿ), ಜನತಾದಳ ಯುನೈಟೆಡ್, ಸಿಪಿಐ ಮತ್ತು ಲೋಕ ಜನಶಕ್ತಿ ಪಕ್ಷಗಳಿಗೆ ತಲಾ 1 ಲಕ್ಷ ದಂಡ ವಿಧಿಸಲಾಗಿದೆ.
ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (NCP) ಒಟ್ಟು ಅನುಸರಣೆಯಲ್ಲಿಲ್ಲವೆಂದು ಕಂಡುಬಂದ ಹಿನ್ನಲೆ ತಲಾ 5 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದೆ.