ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 2ನೇ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ, ಈ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: https://seculartvkannada.com/2021/08/16/people-leaving-afghanistan-kabul-airport-feels-like-a-bus-station/
ಅರ್ಜಿ ಸಲ್ಲಿಸುವ ವಕೀಲರು ಕನಿಷ್ಠ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌಡ ರಸ್ತೆ ಬೆಂಗಳೂರು-560009 ಅಥವಾ ದೂ.ಸಂ. 080- 22211292,22211106 ಕ್ಕೆ ಸಂಪರ್ಕಿಸಬಹುದೆಂದು ಅಪರ ಜಿಲ್ಲಾಧಿಕಾರಿಗಳಾದ ಅನಿತಾ ಲಕ್ಷ್ಮೀ ಅವರು ತಿಳಿಸಿದ್ದಾರೆ.