ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ : ಸುಟ್ಟು ಕರಕಲಾಯ್ತು ದುಬಾರಿ ಕಾರು
ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೆ ದುಬಾರಿ ಕಾರು ಹೊತ್ತಿ ಉರಿದ ಘಟನೆ ನಡೆದಿದೆ. ಬೆಂಗಳೂರಿನ ಎರ್ ಪೋರ್ಟ್ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಚಾಲಕ ಪ್ರಾಣಾಪಯಾದಿಂದ ಪಾರಾಗಿದ್ದಾನೆ…
ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿತ್ತದ್ದಂತೆ ಎಚ್ಚೆತ್ತುಕೊಂಡ ಕಾರಿನ ಚಾಲಕ ಕಾರಿಂದ ಹೊರ ಬಂದಿದ್ದಾನೆ. ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿ ಕೊಂಡಿರುವುದರಿಂದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಆದ್ರೆ ಬೆಂಕಿ ತಗುಲಿದ್ದಂತೆ ಕಾರಣ ಇನ್ನೂ ತಿಳಿದು ಬಂದಿಲ್ಲಾ.. ಸದ್ಯ ಯಾವುದೇ ಸಾವು ಸಂಭವಿಸಿಲ್ಲ.
Fire moving car driver safe airport road Bangalore
