ಬೆಂಗಳೂರು : ಖಾತೆ ಬದಲಾವಣೆಗೆ ಬಿಗಿಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ತಣ್ಣಗಾಗಿದ್ದಾರೆ.. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಇಂದು ನೀಡಿದ ಖಾತೆಯ ಅಧಿಕಾರ ಸ್ವೀಕರಿಸಿದ್ದಾರೆ..

ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ತಮಗೆ ನೀಡಲಾಗಿದ್ದ ಪ್ರವಾಸೋದ್ಯಮ ಪರಿಸರ ಮತ್ತು ಜೀವಶಾಸ್ತ್ರ ಖಾತೆ ಬದಲಾಯಿಸಬೇಕು ಎಂದು ಆನಂದ್ ಸಿಂಗ್ ಬಿಗಿಪಟ್ಟು ಹಿಡಿದಿದ್ರು. ಖಾತೆ ಬದಲಾವಣೆ ಆಗದಿದ್ದರೆ ರಾಜೀನಾಮೆ ನೀಡುವ ಹೇಳಿಕೆ ನೀಡಿದ್ರು. ಈ ಹಿಂದೆ ಮಾಜಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಂಧಾನ ಮಾಡಲಾಗಿತ್ತು.. ಇಂದು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿದ್ರು..ಸಿಎಂ ಭೇಟಿ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ ಸಚಿವ ಆನಂದ್ ಸಿಂಗ್
ವಿಕಾಸಸೌಧದ ನೆಲಮಹಡಿಯಲ್ಲಿ ಇರುವ 36,37 ಕೊಠಡಿಯಲ್ಲಿ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.. ಬಳಿಕ
ಅಧಿಕಾರಿಗಳು ಜೊತೆ ಸಭೆ ನಡೆಸಿದ್ದಾರೆ