ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನ ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ರತ್ನಗಿರಿ ಪೊಲೀಸರು ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಭಾರತದ ಸ್ವಾತಂತ್ರ್ಯದ ವರ್ಷವನ್ನು ಮರೆತಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳಮೋಕ್ಷ ಮಾಡುವೆ ಎಂದು ವಿವಾದಾತ್ಮಕ ಹೇಳಿಕೆ ಕೇಂದ್ರ ಸಚಿವ ನಾರಾಯಣ್ ರಾಣೆ ನೀಡಿದ್ದರು.

ರಾಣೆ ಹೇಳಿಕೆ ಬೆನ್ನಲೆ ಶಿವಸೇನೆಯ ಕಾರ್ಯಕರ್ತರು ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳಲಿ ದೂರು ದಾಖಲಿಸಿದ್ರು. ದೂರು ದಾಖಲಾಗುದ್ದಂತೆ ಸಚಿವ ನಾರಾಯಣ್ ರಾಣೆ ಬಂಧನ ವಾರಂಟ್ ಜಾರಿಮಾಡಲಾಗಿತ್ತು. ವಾರೆಂಟ್ ಜಾರಿ ಹಿನ್ನಲೆ ಸದ್ಯ ಮಹಾರಾಷ್ಟ್ರ ಪೋಲಿಸರು ವಶಕ್ಕೆ ಪಡೆದಿದ್ದಾರೆ
ತಮ್ಮ ಬಂಧನ ಪ್ರಶ್ನಿಸಿ ಕೇಂದ್ರ ಸಚಿವ ನಾರಾಯಣ ರಾಣೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು ಆದ್ರೆ ಹೈಕೋರ್ಟ್ ಅರ್ಜಿ ತಿರಸ್ಕಾರ ಮಾಡಿದ್ದು ಸಂಕಷ್ಟ ಎದುರಾಗಿದೆ.
ಕೇಂದ್ರ ಸಚಿವ ನಾರಾಯಣ ರಾಣೆ ಬಾಳಾ ಠಾಕ್ರೆ ನೇತೃತ್ವದ ಶಿವಸೇನೆಯೊಂದಿಗೆ ಮುಂಬೈನಲ್ಲಿ ರಾಣೆ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು. 1990 ರಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಸೇನಾ ಶಾಸಕರಾಗಿ ಪ್ರವೇಶ. 1999 ರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2005 ರಲ್ಲಿ ಠಾಕ್ರೆಯವರೊಂದಿಗಿನ ಭಿನ್ನಾಭಿಪ್ರಾಯದ ನಂತರ ಶಿವಸೇನೆಯನ್ನು ತೊರೆದಿದ್ದರು.
ಬಳಿಕ ಕಾಂಗ್ರೆಸ್ ಸೇರಿ ರಾಜ್ಯ ಸಚಿವರಾಗಿದ್ದರು.. 2017 ರಲ್ಲಿ ಕಾಂಗ್ರೆಸ್ ಅನ್ನು ತೊರೆದರು. ಪಕ್ಷವು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಭರವಸೆಯನ್ನು ಈಡೇರಿಸಲಿಲ್ಲ ಎಂದು ಆರೋಪಿಸಿದರು. ತಮ್ಮ ಇಬ್ಬರು ಪುತ್ರರಾದ ನಿಲೇಶ್ ಮತ್ತು ನಿತೇಶ್ ಅವರೊಂದಿಗೆ ತಮ್ಮದೇ ಪಕ್ಷವನ್ನು ಸ್ಥಾಪಿಸಿದರು. ನಂತರ ಅದನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು. ಜುಲೈನಲ್ಲಿ ಪ್ರಧಾನಿ ಮೋದಿ ಸಂಪುಟಕ್ಕೆ ಸೇರಿದ್ದರು..