ಮೈಸೂರು: ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಸ್ನೇಹಿತನ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮಂಗಳವಾರ ಸಂಜೆ ಘಟನೆ ಸಂಭವಿಸಿದೆ.
ಚಾಮುಂಡಿ ಬೆಟ್ಟಕ್ಕೆ ಯುವತಿಯು ತನ್ನ ಪ್ರಿಯಕರನ ಜೊತೆ ತೆರಳಿದ್ದಳು. ಅವರಿಬ್ಬರು ಬೈಕ್ನಲ್ಲಿ ವಾಪಸ್ ಬರುವಾಗ ಲಲಿತಾದ್ರಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಮದ್ಯಪಾನ ಮಾಡುತ್ತಿದ್ದ ನಾಲ್ಕೈದು ಜನರ ಗುಂಪೊಂದು ಇವರನ್ನ ತಡೆದು, ಪ್ರಿಯಕರನ ಮೇಲೆ ಹಲ್ಲೆ ನಡೆಸಿದೆ. ಬಳಿಕ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದೆ ಎಂದು ತಿಳಿದು ಬಂದಿದೆ.
ಯುವತಿ ಹಾಗೂ ಆಕೆಯ ಪ್ರಿಯಕರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಪಿಗಳು ಯಾರು? ಹೊರಗಿನಿಂದ ಬಂದವರಾ? ಅಥವಾ ಸ್ಥಳೀಯರಾ? ಅವರೆಲ್ಲರೂ ಯಾಕೆ ಲಲಿತಾದ್ರಿಪುರ ಬೆಟ್ಟಕ್ಕೆ ಬಂದಿದ್ದರು ಎಂಬಿತ್ಯಾದಿ ಮಾಹಿತಿಗಳನ್ನು ಸದ್ಯ ಪೋಲೀಸರು ಕಲೆ ಹಾಕುತ್ತಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.