ಚಿಕ್ಕಬಳ್ಳಾಪುರ : ರಾತ್ರಿಯಿಡಿ ಸುರಿದ ಧಾರಾಕಾರ ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿತವಾಗಿದ್ದು ನಂದಿ ಬೆಟ್ಟಕ್ಕೆ ಸಂಪರ್ಕ ಕಲ್ಲಿಸುವ ರಸ್ತೆ ಬಂದ್ ಆಗಿದೆ. ಸದ್ಯ ಬೆಟ್ಟಕ್ಕೆ ಭೇಟಿ ನೀಡಲು ಬರ್ತಿರೋ ಪ್ರವಾಸಿಗರನ್ನಾ ಪೋಲಿಸರು ವಾಪಸ್ ಕಳಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಬೆಟ್ಟದ ಮೇಲಿಂದ ಹರಿದು ಬಂದಿರೋ ನೀರಿನಿಂದ ಬೆಟ್ಟ ಕುಸಿದಿದೆ ಎನ್ನಲಾಗ್ತಿದೆ.

ತಗ್ಗು ಪ್ರದೇಶಗಳಿಗೆ ನೀರು, ಜನರ ಪರದಾಟ
ಭಾರಿ ಮಳೆಯಿಂದಾಗಿ ಈ ಅವಗಢ ಸಂಭವಿಸಿದೆ. ಜೊತೆಗೆ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನ್ರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೈ ಭೀಮ್ ನಗರದ ಬಡಾವಣೆಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃ಼ಷ್ಟಿಸಿದೆ. ಜನರು ಸ್ಥಳೀಯ ಆಡಳಿತಕ್ಕೆ ಹಿಡಿಶಾಪ ಹಾಕಿದ್ದಾರೆ.

ಧರೆಗುರುಳಿದ ಮರ ವಿದ್ಯುತ್ ಕಂಬಗಳು
ರಾತ್ರಿಯ ಮಳೆಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ್ದು ಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ.. ಮರಗಳು ಧರೆಗುರುಳಿದ್ದು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಮಾಡಲಾಗ್ತಿದೆ. ಆದ್ರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.