ನವದೆಹಲಿ: ದೇಶ ಮತ್ತು ಜನರ ಹಿತಾಸಕ್ತಿಗಾಗಿ ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ಬಳಿಕ ಮಾತನಾಡಿದರು.
ಅಫ್ಘಾನಿಸ್ತಾನ ಸಂಘರ್ಷ ಇಡೀ ದೇಶದ ಸಮಸ್ಯೆ, ಜನರು ಮತ್ತು ರಾಷ್ಟ್ರದ ಹಿತಾಸಕ್ತಿಗಾಗಿ ನಾವು ಒಟ್ಟಾಗಿ ಸೇರಬೇಕು ಹೀಗಾಗಿ ನಾವು ಸರ್ಕಾರದ ಜೊತೆಗೆ ಇರಲಿದ್ದೇವೆ ಎಂದು ತಿಳಿಸಿದರು.
ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ತಾಲಿಬಾನ್ ಸಂಘರ್ಷದ ಬಗ್ಗೆ ಚರ್ಚಿಸಲು ಕೇಂದ್ರ ವಿದೇಶಾಂಗ ಸಚಿವ ಕೈ ಶಂಕರ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಸರ್ಕಾರ ಈವರೆಗೂ ಕೈಗೊಂಡ ಕ್ರಮಗಳೇನು ಎಂದು ವಿವರಣೆ ನೀಡಿತ್ತು. ಅಲ್ಲದೇ ಮುಂದೆ ಭಾರತದ ನಿಲುವು ಹೇಗಿರಬೇಕು ಎಂದು ಸಲಹೆ ಪಡೆಯಲಾಗಿತು.
ಸಭೆಯಲ್ಲಿ ಎನ್‌ಸಿಪಿ ಪಕ್ಷದ ಹಿರಿಯ ನಾಯಕ ಶರದ್ ಪವಾರ್, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಡಿಎಂಕೆ ನಾಯಕ ಟಿ.ಆರ್ ಬಾಲು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅಪ್ನಾ ದಳ ನಾಯಕಿ ಅನುಪ್ರಿಯಾ ಪಟೇಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.