ಮೈಸೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ನಡೆದ ಹಿನ್ನಲೆ ಗೃಹ ಸಚಿವ ಅರಗ ಜ್ಞಾನೇಂದ್ರರವರು ಇಂದು ಮೈಸೂರಿಗೆ ಭೇಟಿ ನೀಡಿದ್ದಾರೆ. ಮೊದಲು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಹೋಂ ಮಿನಿಸ್ಟರ್ ತಾಯಿ ಚಾಮುಂಡೇಶ್ವರಿ ದರ್ಶನ
ಪಡೆದರು. ಬಂದಿರುವ ಸಂದಿಗ್ಧತೆಯನ್ನು ನಿವಾರಣೆ ಮಾಡಿಕೊಳ್ಳುವ ಶಕ್ತಿಯನ್ನು ಪೊಲೀಸರಿಗೆ ನೀಡಲಿ ಎಂದು ದೇವರನ್ನು ಪ್ರಾರ್ಥಿಸಿದ್ದೇನೆ, ಇನ್ನೂ ಆರೋಪಿ ಗಳು ಪತ್ತೆಯಾಗಿಲ್ಲ, ಆರೋಪಿಗಳ ಪತ್ತೆಗೆ ಸ್ವಲ್ಪ ಸಮಯ ಬೇಕಿದೆ, ಸಂತ್ರಸ್ತೆ ಇನ್ನೂ ತಮ್ಮ ಹೇಳಿಕೆಯನ್ನು ಪೊಲೀಸರಿಗೆ ತಿಳಿಸಿಲ್ಲ ಮತ್ತು ವಿಚಾರಣೆಗೆ ತೊಂದರೆ ಆಗುವ ದೃಷ್ಟಿಯಿಂದ ನಾನು ಹೆಚ್ಚಿನ ವಿವರ ನೀಡುವುದಿಲ್ಲ ಎಂದರು.

ಗ್ಯಾಂಗ್‌ರೇಪ್‌ನ ಆರೋಪಿಗಳ ಗುರುತು ಪತ್ತೆ ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಯುವತಿಯ ಜತೆಗಿದ್ದ ಯುವಕನಿಂದ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸಂತ್ರಸ್ತೆಯ ಜತೆಗಿದ್ದ ಯುವಕ ಕೂಡಾ ಸ್ಪಷ್ಟ ಮಾಹಿತಿ ನೀಡುವಲ್ಲಿ ವಿಫಲವಾಗುತ್ತಿದ್ದಾನೆ. ಪ್ರಕರಣದ ಬಗ್ಗೆ ಪೊಲೀಸರಿಗೆ ಸೂಕ್ತ ಮಾಹಿತಿ ಕೊರತೆ ಹಿನ್ನೆಲೆ ಆರೋಪಿಗಳ ಪತ್ತೆಗೆ ದೊಡ್ಡ ಸಮಸ್ಯೆಯಾಗುತ್ತಿದೆ. ಆರೋಪಿಗಳ ಚಹರೆ, ಅವರು ಮಾತನಾಡುತ್ತಿದ್ದ ಭಾಷೆ, ಯಾವ ವಾಹನದಲ್ಲಿ ಬಂದಿದ್ದರೆಂಬ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಸಿಕ್ಕಿಲ್ಲ. ಸದ್ಯ ಯುವಕನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಸಾಧ್ಯವಾಗಿಲ್ಲ ಎಂದರು.
ಇನ್ನು ಅರಗ ಜ್ಞಾನೇಂದ್ರ ಅವರ ಬೇಜಾವಾಬ್ದಾರಿ ಹೇಳಿಕೆ ಕುರಿತು ಸಿಎಂ ಪ್ರತಿಕ್ರಿಯೆಗೆ ಪ್ರತಿಕ್ರಿಯಿಸಿದ ಅವರು ಸಿಎಂ ಅವರಿಗೆ ಅದನ್ನು ಹೇಳುವ ಅಧಿಕಾರ ಇದೆ ಎಂದರು. ಯಾವ ಹಂತದಲ್ಲಿ ತನಿಖೆ ನಡೆಯುತ್ತಿದೆ ಎಂಬುದನ್ನು ಹೇಳಲಾಗುವುದಿಲ್ಲ. ಖಂಡಿತವಾಗಲೂ ಈ ಪ್ರಕರಣವನ್ನು ಬೇಧಿಸುತ್ತೇವೆ ಎಂದು ವಿಶ್ವಾಸವಿದೆ ಎಂದರು. ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿರುವುದನ್ನು ಒಪ್ಪಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆಯ ಗೃಹ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದರು.