ಬೆಂಗಳೂರು: ಕರಾವಳಿ ಸೇರಿಂದತೆ ಒಳನಾಡಿನ ಒಂಭತ್ತು ಜಿಲ್ಲೆಗಳಿಗೆ ಶನಿವಾರ ಹಾಗೂ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಪೂರ್ವ ಅರಬ್ಬಿಸಮುದ್ರದ ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಹಾಗಾಗಿ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದರು..
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದೆ. ಆಗಸ್ಟ್ 28 ಮತ್ತು 29ರಂದು ಆರೆಂಜ್ ಅಲರ್ಟ್ ಹಾಗು 30ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಇರಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಒಳನಾಡಿನಲ್ಲಿ ವ್ಯಾಪಕ ಮಳೆ:
ನೈರುತ್ಯ ಮುಂಗಾರು ಶುಕ್ರವಾರ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು. ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಬುಹತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆಯಲ್ಲಿ 13 ಸೆಂ.ಮೀ., ಉಡುಪಿಯ ಕಾರ್ಕಳದಲ್ಲಿ 7 ಸೆಂ.ಮೀ, ಕೋಲಾರದ ಕೆಜಿಎಫ್, ಕೊಡಗಿನ ಭಾಗಮಂಡಲದಲ್ಲಿ ತಲಾ 5 ಸೆಂ.ಮೀ, ಶಿರಾಲಿ, ಕಾರವಾರ, ಉತ್ತರ ಕನ್ನಡದ ಭಟ್ಕಳ, ಆನೇಕಲ್, ತುಮಕೂರಿನ ಬುಕ್ಕಪಟ್ಟಣ, ಕೋಲಾರದ ಬಂಗಾರಪೇಟೆಯಲ್ಲಿ ತಲಾ 4 ಸೆಂ.ಮೀ, ಶಿವಮೊಗ್ಗದ ತಾಳಗುಪ್ಪ, ಬೆಂಗಳೂರು ನಗರ, ಚಾಮರಾಜನಗರದ ಎಂ.ಎಂ. ಹಿಲ್ಸ್, ಬಳ್ಳಾರಿಯ ಹಡಗಲಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ವರುಣನ ಆರ್ಭಟ – ಮಲ್ಲೇಶ್ವರಂ ನಲ್ಲಿ ಧರೆಗುರುಳಿದ ಮರ
ಸಿಲಿಕಾನ್ ಸಿಟಿ ಬೆಂಗಳೂರಿಗೆ ಇಂದು ಮಧ್ಯಾಹ್ನವೇ ವರುಣ ಎಂಟ್ರಿ ಕೊಟ್ಟಿದ್ದ.. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ ಸುರಿದ ಮಳೆಗೆ ವಾಹನ ಸವಾರರು ಹೈರಾಣವಾದರು.. ಇನ್ನೂ
ಮಲ್ಲೇಶ್ವರದ ಸಂಪಿಗೆ ರಸ್ತೆಯ 8 ಬೇ ಕ್ರಾಸ್ ನಲ್ಲಿ ಭಾರಿ ಮರೆಗೆ ಬೃಹತ್ ಮರವೊಂದು ಉರುಳಿ ಬಿದ್ದಿತ್ತು.. ಮರ ಪುಟ್ ಪಾತ್ ಮೇಲೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಿಲ್ಲ ಸಂಭವಿಸಿಲ್ಲಾ.
40 ಅಡಿ ಉದ್ದವಿರುವ ಬೃಹತ್ ಮರವಾದ್ದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು..