ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ದುಷ್ಕರ್ಮಿಗಳು ನಾಲ್ವರು ಸಹೋದರರನ್ನು ಕಲ್ಲು ಹಾಗೂ ಮಾರಾಕಾಸ್ತ್ರಗಳನ್ನು ಬಳಸಿ ಹತ್ಯೆಗೈದು, ಪರಾರಿಯಾಗಿದ್ದಾರೆ. ಮಲ್ಲಪ್ಪ ಉದಗಟ್ಟಿ (35) ಹನುಮಂತ ಉದಗಟ್ಟಿ (45), ಈಶ್ವರ ಉದಗಟ್ಟಿ (35) ಬಸಪ್ಪ ಉದಗಟ್ಟಿ (37) ಕೊಲೆಯಾದ ದುರ್ದೈವಿಗಳಾಗಿದ್ದಾರೆ.

ಎರಡು ಕುಟುಂಬಗಳ ಮಧ್ಯೆ ಇದ್ದ ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಜಮಖಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.