ಮೈಸೂರು : ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಐದು ಮಂದಿ ಕಾಮುಕರು ಅರೆಸ್ಟ್ ಆಗಿದ್ದಾರೆ.
ನಿನ್ನೆ ತಡರಾತ್ರಿ ಆರೋಪಿಗಳನ್ನು ಬಂಧಿಸಿರುವ ಮಾಹಿತಿ ಲಭ್ಯವಾಗಿದ್ದು ಅವರನ್ನು ಮೈಸೂರಿಗೆ ಕರೆ ತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಪ್ರಕರಣದಲ್ಲಿ ಐದು ಮಂದಿ ಆರೋಪಿಗಳಿದ್ದು, ನಾಲ್ವರು ತಮಿಳುನಾಡು ಮೂಲದವರಾಗಿದ್ದು ಓರ್ವ ಕೇರಳದವನು ಎನ್ನಲಾಗಿದೆ.
ಆರೋಪಿಗಳೇಲ್ಲ ಮೈಸೂರಿನಲ್ಲೆ ಬಿಇ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದ್ದು ಪರೀಕ್ಷೆಗೆ ಹಾಜರಾಗದೇ ತಮಿಳುನಾಡು ಮತ್ತು ಕೇರಳದಲ್ಲಿ ತಲೆಮರೆಸಿಕೊಂಡಿದ್ದರು. ತನಿಖೆಗೆ ರಚನೆಯಾಗಿದ್ದ ವಿಶೇಷ ತಂಡ ಆರೋಪಿಗಳನ್ನು ಬಂಧಿಸಿದೆ. ಸಂಜೆ ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ಸೂದ್ ಸುದ್ದಿಗೋಷ್ಟಿ ನಡೆಸಲಿದ್ದು ಪ್ರಕರಣ ಸಂಪೂರ್ಣ ವಿವರ ನೀಡಲಿದ್ದಾರೆ.
ಆರೋಪಿಗಳ ಬಂಧವಾದ ಬೆನ್ನಲೆ ಈಗ ಗೃಹ ಸಚಿವ ಅರಗ ಜ್ಞಾನೇಂದ್ರ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಚಾಮರಾಜನಗರದ ವ್ಯಕ್ತಿವೊರ್ವ ಭಾಗಿಯಾಗಿರುವ ಮಾಹಿತಿ ಇದ್ದು ಇದು ಇನ್ನಷ್ಟು ಖಚಿತವಾಗಬೇಕಿದೆ.