ಬೆಂಗಳೂರು : ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಕೇರಳದಿಂದ ರಾಜ್ಯಕ್ಕೆ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಒಂದು ವಾರದ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ.
ಇನ್ಮುಂದೆ ಕೇರಳದಿಂದ ರಾಜ್ಯಕ್ಕೆ ಬರುವವರು ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿದ್ದು ಕ್ವಾರಂಟೈನ್ ಬಳಿಕ ಕೋವಿಡ್ ಪರೀಕ್ಷೆ ಕೂಡ ಕಡ್ಡಾಯವಾಗಿದೆ. ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಮಾಡಲು ಈ ಮಹತ್ವದ ಆದೇಶ ಹೊರಬಿದ್ದಿದ್ದು ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಇಂದು ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಯಲ್ಲಿ ಸಚಿವರಾದ ಆರ್ ಅಶೋಕ, ಡಾ. ಕೆ. ಸುಧಾಕರ್, ಎಸ್ ಟಿ ಸೋಮಶೇಖರ, ಬಿ ಸಿ ನಾಗೇಶ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ತಜ್ಞ ವೈದರಾದ ಡಾ. ಸುದರ್ಶನ್, ಡಾ. ಸಿ ಎನ್ ಮಂಜುನಾಥ, ಡಾ. ದೇವಿಶೆಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.