ಬೆಂಗಳೂರು: ಸಚಿವ ಶ್ರೀರಾಮುಲು ಆಪ್ತನೆಂದು ಹೇಳಿ ವಂಚಿಸುತ್ತಿದ್ದ ಧರ್ಮತೇಜ್ ಎಂಬ ವ್ಯಕ್ತಿಯನ್ನು ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧರ್ಮತೇಜ್ ಬಾಗಲೂರು ಮೂಲದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಸಚಿವ ಬಿ. ಶ್ರೀರಾಮುಲು ಪಿಎ ಎಂದು ಸುಳ್ಳು ಹೇಳುತ್ತಿದ್ದ ಎಂದು ತಿಳಿದುಬಂದಿದೆ.

ಆರೋಪಿ ಧರ್ಮತೇಜ್ ಕೆಲಸ ಕೊಡಿಸುವುದಾಗಿ ಪ್ರದೀಪ್ ಎಂಬುವರಿಂದ 5 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ. ಹಣಕಾಸಿನ ವ್ಯವಹಾರದ ಬಗ್ಗೆ ಸಾಕ್ಷಿ ಸಮೇತ ಪ್ರದೀಪ್ ಎಂಬವರು ದೂರು ನೀಡಿದ್ದರು. ದೂರಿನನ್ವಯ ಎಫ್‍ಐಆರ್ ದಾಖಲು ಮಾಡಿಕೊಂಡಿದ್ದ ಪೊಲೀಸರು ಧರ್ಮತೇಜ್ ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಆರೋಪಿಯನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಧರ್ಮತೇಜ್ ನನ್ನು ವಿಚಾರಣೆ ನಡೆಸಿದ್ದಾರೆ.
ಬೆಂಗಳೂರು, ಶ್ರೀರಾಮುಲು, ನಕಲಿ ಪಿಎ, ಬಂಧನ, ಸೆಕ್ಯೂಲರ್ ಟಿವಿ, Bangalore, Shriramulu, PA, Arrest, SecularTv