ಬೆಂಗಳೂರು: ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಬಹುಮುಖ್ಯ ಮಾಹಿತಿ ತಿಳಿಸಿದೆ. ಇಲಾಖೆ ಸೂಚಿಸಿದ ಅವಧಿಯಲ್ಲಿ ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಕೆಲ ಪ್ರಕ್ರಿಯೆಗಳು ಪೂರ್ಣವಾಗಿಲ್ಲ. ಹೀಗಾಗಿ ಅರ್ಧ ವಾರ್ಷಿಕ ವೇಳಾಪಟ್ಟಿಯಲ್ಲಿ ಮರು ಹೊಂದಾಣಿಕೆ ಮಾಡಿ ಪ್ರಥಮ ಕಿರುಪರೀಕ್ಷೆಯನ್ನು ರದ್ದುಪಡಿಸಲಾಗಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಆ.೨೩ರಿಂದ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿತ್ತು. ಆದರೆ, ಕೆಲ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಹೀಗಾಗಿ ಕೆಲ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲಾಗಿಲ್ಲ. ಈ ಕಾರಣಕ್ಕಾಗಿ ಇಲಾಖೆ ಅರ್ಧ ವಾರ್ಷಿಕ ವೇಳಾಪಟ್ಟಿಯಲ್ಲಿ ಮರು ಹೊಂದಾಣಿಕೆ ಮಾಡಿ ಪ್ರಥಮ ಕಿರುಪರೀಕ್ಷೆಯನ್ನು ರದ್ದುಪಡಿಸಿದೆ. ಅಲ್ಲದೇ, ಮೊದಲ ಎರಡು ಅವಧಿಗಳಿಗೆ ನಿರ್ದಿಷ್ಟ ಪಡಿಸಿರುವ ಪಠ್ಯಕ್ರಮಗಳ ಪೂರ್ಣ ಪಾಠಗಳನ್ನು ಬೋಧನೆ ಮಾಡಿ ಈಗಾಗಲೇ ಪ್ರಸಕ್ತ ಸಾಲಿನಲ್ಲಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯಂತೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.