ಚಾಮರಾಜನಗರ : ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಚಾಮರಾಜನಗರದ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಪೂನಜೂರು ಬಳಿ ನಡೆದಿದೆ. ತಮಿಳುನಾಡಿನಿಂದ ಕಡಕೊಳ ಕೈಗಾರಿಕಾ ಪ್ರದೇಶಕ್ಕೆ ಹೋಗುತ್ತಿದ್ದ ಸಿಮೆಂಟ್ ಲಾರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿತು.
ಅಗ್ನಿ ಶಾಮಕ ಸಿಬ್ಬಂದಿಗೆ ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿಯಲ್ಲಿ ಸುಮಾರು ೪೦೦ಕ್ಕೂ ಹೆಚ್ಚು ಸಿಮೆಂಟ್ ಚೀಲಗಳು ತುಂಬಿತ್ತು. ನೋಡ ನೋಡುತ್ತಿದಂತೆ ಲಾರಿ ಸಂಪೂರ್ಣ ಭಸ್ಮವಾಗಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬೆಂಕಿ ಉರಿಯುತ್ತಿದ್ದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಪರಿಸ್ಥಿತಿ ತಿಳಿಗೊಳಿಸಲು ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟರು.