ಬೆಂಗಳೂರು: ಗೌರಿ-ಗಣೇಶ ಹಬ್ಬದ ಅಂಗವಾಗಿ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಇಂದು ಶಾಸಕ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ದಿನಸಿ ಕಿಟ್ ಗಳನ್ನು ವಿತರಿಸಲಾಯ್ತು.

ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು. ಶಾಸಕರಾದ ಬೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಎಂ. ಆರ್. ಸೀತಾರಾಮ್ ಹಾಜರಿದ್ದರು.
