ಬೆಂಗಳೂರು: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಮಾರ್ಗಸೂಚಿ ಪ್ರಕಟಿಸಿದ್ದು, ಬೆಂಗಳೂರಿಗರಿಗೆ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ. ಇದರ ಜೊತೆಗೆ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡುವಂತೆ ಕರೆ ನೀಡಿದ್ದಾರೆ.
ಬಿಬಿಎಂಪಿಯ ಮಾರ್ಗಸೂಚಿಗಳು
ಬೆಂಗಳೂರಿನ 198 ವಾರ್ಡ್ ಗಳಲ್ಲಿ ಒಂದೊಂದು ವಾರ್ಡ್ ನಲ್ಲಿ ಕೇವಲ ಒಂದು ಗಣಪತಿಯನ್ನು ಮಾತ್ರ ಸ್ಥಾಪಿಸಲು ಅವಕಾಶ ನೀಡಲಾಗಿದ್ದು, ಈ ಸಂಬಂಧ ವಾರ್ಡ್ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಿದೆ ಹಾಗೂ ಸ್ಥಳವನ್ನು ಪಾಲಿಕೆ ನಿಗದಿ ಮಾಡುತ್ತದೆ. ಸೆಪ್ಟೆಂಬರ್ 8ರ ಒಳಗಾಗಿ ಜಾಗ ನಿಗದಿಪಡಿಸಿ ವ್ಯವಸ್ಥೆ ಮಾಡಿಕೊಳ್ಳಲು ಆದೇಶ ನೀಡಲಾಗಿದೆ.

ಸಾರ್ವಜನಿಕರ ವಾಹನಗಳಿಗೆ ಯಾವುದೇ ಅಡ್ಡಿಯಾಗದಂತೆ ಗಣೇಶ ಮೂರ್ತಿಯನ್ನು ಸ್ಥಾಪಿಸಬೇಕು. ಆಯಾ ವಿಭಾಗದ ಸಂಚಾರಿ ಪೊಲೀಸರು ಈ ಬಗ್ಗೆ ಕ್ರಮ ತೆಗದುಕೊಳ್ಳಬೇಕು ನಾಲ್ಕು ಅಡಿ ಎತ್ತರ ಮೀರಿ ಗಣೇಶ ಮೂರ್ತಿ ಕೂರಿಸುವಂತಿಲ್ಲ.ಕೆರೆಗಳಲ್ಲಿ ವಿಸರ್ಜನೆಗೆ ಅವಕಾಶ ಇಲ್ಲ. ಯಾವುದೇ ಸಾರ್ವಜನಿಕ ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ. ಕೇವಲ ಪೂಜೆ ಮಾಡಲು ಅವಕಾಶ ನೀಡಲಾಗಿದೆ.
ಸಾರ್ವಜನಿಕವಾಗಿ ಸ್ಥಾಪಿರುವ ಗಣಪತಿಯ ದರ್ಶನಕ್ಕೆ ಬರುವ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ದೇವಾಲಯ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯ ಹಾಗೂ ಪ್ರತಿದಿನ ಸ್ಥಳವನ್ನು ಸ್ಯಾನಿಟೈಸೇಷನ್ ಮಾಡಬೇಕು.ಒಮ್ಮೆಲೆ ಕೇವಲ 20 ಜನ ಭಕ್ತಾದಿಗಳಿಗೆ ಮಾತ್ರ ಅವಕಾಶ ನೀಡಬೇಕು. ಹೆಚ್ಚು ಜನ ಸೇರದಂತೆ ಎಚ್ಚರಿಕೆ ವಹಿಸಬೇಕು.

ಸಾರ್ವಜನಿಕವಾಗಿ ಗಣಪತಿ ಸ್ಥಾಪನೆ ಮಾಡುತ್ತಿರುವ ಆಯೋಜಕರು ಲಸಿಕೆ ಪ್ರಮಾಣ ಪತ್ರ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು. ಅಲ್ಲದೇ ಆ ಸ್ಥಳದಲ್ಲಿ ಲಸಿಕೆ ಅಭಿಯಾನವನ್ನು ಆರೋಗ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಹಮ್ಮಿಕೊಳ್ಳಬೇಕು. ಇದನ್ನೂ ಓದಿ: ವೈರಲ್ ಆಗ್ತಿದೆ ದಿವ್ಯಾ ಸುರೇಶ್, ಮಂಜು ಪಾವಗಡ ಫೋಟೋ!
ಗಣೇಶ ಮೂರ್ತಿ ವಿಸರ್ಜನೆ ಮಾಡುವ ಸಮಯದಲ್ಲಿ ಯಾವುದೇ ಕಾರಣಕ್ಕೂ ಹೆಚ್ಚು ಜನರು ಸೇರಬಾರದು, ಮೆರವಣಿಗೆ ನಡೆಸಲು ಅನುಮತಿ ಇಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾಯ್ದೆ 2005 ಹಾಗೂ ಐಪಿಸಿ 188 ಅಡಿಯಲ್ಲಿ ಕ್ರಮ ತೆಗದುಕೊಳ್ಳಲಾಗುವುದು. ಪಿಓಪಿ ಇಂದ ತಯರಾದ ಮೂರ್ತಿಗಳಿಗೆ ಅವಕಾಶ ಇಲ್ಲ. ಪಿಓಪಿ ಇಂದ ತಯಾರದ ಮೂರ್ತಿ ಬಳಸಿದರೆ ದಂಡ ವಿಧಿಸಲಾಗುತ್ತದೆ ಹಾಗೂ ಕಠಿಣ ಶಿಕ್ಷೆಯನ್ನು ಸಹ ನೀಡಲಾಗುತ್ತದೆ. ಇದನ್ನೂ ಓದಿ: ನಾವಿಬ್ಬರೂ ಒಂದಾಗಿದ್ದೇವೆ: ಥ್ರಿಲ್ ಹಂಚಿಕೊಂಡ ಡಿಂಪಲ್ ಕ್ವೀನ್