ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2021 ರ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಸೆಣಸಾಡಲಿದೆ.

ಹಿರಿಯ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಅವರನ್ನು ತಂಡದಿಂದ ಹೊರಗಿಡಲಾಗಿದ್ದು, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ದೀಪಕ್ ಚಹರ್ ಅವರನ್ನು ಸ್ಟ್ಯಾಂಡ್ ಬೈ ಆಗಿ ಉಳಿಸಲಾಗಿದೆ.
ಇದನ್ನೂ ಓದಿ : ಐಡಿ ಪ್ರೆಶ್ ಉತ್ಪನ್ನಗಳಿಗೆ ಮತೀಯ ಬಣ್ಣ – ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಪೋಸ್ಟ್
ಅಕ್ಟೋಬರ್ 24ರಂದು ದುಬೈನಲ್ಲಿ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡವು ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಸೆಣಸಲಿದೆ.
2016ರ ನಂತರ ಮೊದಲ ಬಾರಿಗೆ ಈ ಟಿ 20 ವಿಶ್ವಕಪ್ ನಡೆಯಲಿದ್ದು ಒಮನ್, ಯುಎಇ, ಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ಟಿ-20 ಪಂದ್ಯಗಳು ನಡೆಯಲಿದೆ.
ಐಸಿಸಿ ಕೊನೆಯ 15 ಆಟಗಾರರ ಹೆಸರನ್ನು ನೀಡಲು ಅಕ್ಟೋಬರ್ 15 ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದು ಪಂದ್ಯಗಳು ಆರಂಭಕ್ಕೆ ಒಂದು ವಾರ ಮುಂಚೆಯಾಗಿರುತ್ತದೆ, ಈ ಬಾರಿ ಐಸಿಸಿ ಕೋವಿಡ್ ಕಾರಣದಿಂದಾಗಿ ಏಳು ಹೆಚ್ಚುವರಿ ಸದಸ್ಯರನ್ನು ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಿದೆ.
ಟಿ-20 ವಿಶ್ವಕಪ್ ಭಾರತ ತಂಡ ಹೀಗಿದೆ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ

ಇಂಗ್ಲೆಂಡ್‌ನಲ್ಲಿ ಭಾರತ ಪ್ರವಾಸ : ಈ ವಿಶ್ವಕಪ್ ಹಣಾಹಣಿಯ ಮೊದಲು ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಟಿ 20 ಮತ್ತು ಏಕದಿನ ಸರಣಿಗಳನ್ನು ಆಡಲಿದೆ.
ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹhttps://t.co/4xbopGtqzb#Ganeshotsava #GaneshaStatue #DKShivakumar #Congress #KannadaNews
— Secular TV (@SecularTVKannad) September 8, 2021
