ಜೈಪುರ: ಮೊಟ್ಟ ಮೊದಲ ಬಾರಿಗೆ ಭಾರತದ ವಾಯುಪಡೆಯ ವಿಮಾನ ರಾಜಸ್ಥಾನ ಜಲೋರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಲ್ಯಾಂಡ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಮಾನ ಲ್ಯಾಂಡಿಂಗ್ ಸೌಲಭ್ಯವನ್ನು ಉದ್ಘಾಟಿಸಲಾಯ್ತು.

ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಏರ್ ಚೀಫ್ ಮಾರ್ಷಲ್ ಆರ್ಕೆಎಸ್ ಭದೌರಿಯಾ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು. ಸುಖೋಯ್ ಸು-30 ಎಂಕೆಐ ಮತ್ತು ಸಿ-130 ಜೆ ಸೂಪರ್ ಹಕ್ರ್ಯುಲಸ್ ವಿಮಾನ ಹೆದ್ದಾರಿಯಲ್ಲಿ ತುರ್ತು ಫೀಲ್ಡ್ ಲ್ಯಾಂಡಿಂಗ್ ಆಯಿತು. ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ, ಬಿಪಿನ್ ರಾವತ್ ಅವರನ್ನು ಹೊತ್ತ ಭಾರತೀಯ ವಾಯುಪಡೆಯ ಎ ಹರ್ಕ್ಯುಲಸ್ ಸಿ-130ಜೆ ವಿಮಾನ ಗುರುವಾರ ಈ ಹೆದ್ದಾರಿಯಲ್ಲಿ ಅಣುಕು ತುರ್ತು ಭೂಸ್ಪರ್ಶ ಮಾಡಿತು.

ಇದೇ ಮೊದಲ ಬಾರಿಗೆ ತುರ್ತು ಭೂಸ್ಪರ್ಶಕ್ಕಾಗಿ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿ ಬಳಸಲಾಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ವಾಯು ನೆಲೆ ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ಸಂಪೂರ್ಣ ಸಿದ್ಧವಾಗಿದೆ ಎಂಬುದು ದೃಢಪಟ್ಟಿದೆ. ಇದನ್ನೂ ಓದಿ: ಗಣೇಶ ಭಕ್ತರ ಆಕ್ರೋಶಕ್ಕೆ ಹೆದರಿದ BBMP – ಮಾರ್ಗಸೂಚಿ ಬದಲಾವಣೆ!
#WATCH | For the first time, a Sukhoi Su-30 MKI fighter aircraft lands at the national highway in Jalore, Rajasthan pic.twitter.com/BVVOtCpT0H
— ANI (@ANI) September 9, 2021
ಭಾರತೀಯ ವಾಯುಪಡೆಗೆ ತುರ್ತು ಭೂಸ್ಪರ್ಶದ ಸೌಲಭ್ಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ 925ರ ಸತ್ತಾ-ಗಾಂಧವ್ ಸ್ಟ್ರೆಚ್ ನಲ್ಲಿ 3 ಕಿ.ಮೀ ರಸ್ತೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ನಿಮ್ಮ ಧಮ್ಕಿಗೆ ಹೆದರಲ್ಲ – ಪ್ರತಾಪ್ ಸಿಂಹಗೆ ತನ್ವೀರ್ ಸೇಠ್ ಎಚ್ಚರಿಕೆ