ಮುಂಬಯಿ: ಪ್ರತಿ ವರ್ಷ ಗಣೇಶ ಚತುರ್ಥಿಯ ಹಬ್ಬವನ್ನು ದೇಶದಾದ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ವರ್ಷ ಗಣೇಶ ಚತುರ್ಥಿ ಹಬ್ಬವು ಸೆಪ್ಟೆಂಬರ್ 10 ರಿಂದ ಆರಂಭವಾಗಲಿದೆ. ಸಾಮಾನ್ಯ ಜನರಿಂದ ಹಿಡಿದು ಸಿನಿಮಾ ಸೆಲೆಬ್ರಿಟಿಗಳು ಕೂಡ ತಮ್ಮ ತಮ್ಮ ಮನೆಗಳಲ್ಲಿ ಗಣೇಶನನ್ನು ವಿಶೇಷ ರೀತಿಯಲ್ಲಿ ಸ್ವಾಗತಿಸಲು ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಕೂಡ ಪ್ರತಿವರ್ಷ ಗಣೇಶ ಚತುರ್ಥಿಯ ಹಬ್ಬವನ್ನು ಆಚರಿಸುತ್ತಾರೆ. ಆದರೆ, ಈ ಬಾರಿ 'ಟೈಗರ್ 3' ಶೂಟಿಂಗ್ ವೇಳಾಪಟ್ಟಿಯಿಂದಾಗಿ, ಅವರು ತಮ್ಮ ಕುಟುಂಬದೊಂದಿಗೆ ಗಣಪತಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ಸಲ್ಮಾನ್ ಖಾನ್ ನಟನೆಯ ಮುಂಬರುವ ಚಿತ್ರ 'ಟೈಗರ್ 3' ಆಸ್ಟ್ರಿಯಾದಲ್ಲಿ ಚಿತ್ರೀಕರಿಸುತ್ತಿದ್ದಾರೆ. ಈ ಕಾರಣದಿಂದಾಗಿ ಅವರು ಈ ವರ್ಷ ತಮ್ಮ ಕುಟುಂಬದೊಂದಿಗೆ ಗಣಪತಿ ಉತ್ಸವದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಗಣೇಶ ಚತುರ್ಥಿಯ ಹಬ್ಬವನ್ನು ಸಲ್ಮಾನ್ ಖಾನ್ ಮತ್ತು ಅವರ ಸಹೋದರಿ ಅರ್ಪಿತಾ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದನ್ನೂ ಓದಿ : ಐಸಿಸಿ ವಿಶ್ವಕಪ್ ಟಿ-20ಗೆ ಭಾರತ ತಂಡ ಪ್ರಕಟ:

ಮಾಧ್ಯಮ ವರದಿಗಳ ಪ್ರಕಾರ, ಪ್ರತಿ ವರ್ಷದಂತೆ ಈ ವರ್ಷವೂ ಸಲ್ಮಾನ್ ಖಾನ್ ಅವರ ಕುಟುಂಬವು ಒಂದೂವರೆ ದಿನಗಳ ಕಾಲ ಮನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಿದೆ.