ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಯುವಕರು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯನ್ನು ಕೆಲವು ಕಿಡಿಗೇಡಿಗಳು ಧ್ವಂಸಗೊಳಿಸಿದ ಘಟನೆ ವರದಿಯಾಗಿದೆ.
ಅದೇ ಗ್ರಾಮದ ಯುವಕರ ಸಂಘವೊಂದು ಗಣೇಶ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕವಾಗಿ ಗಣೇಶನನ್ನು ಪ್ರತಿಷ್ಠಾಪಿಸಿದ್ದು, ತಡರಾತ್ರಿ ಕಿಡಿಗೇಡಿಗಳ ಗುಂಪೊಂದು ಗಣಪತಿ ಮೂರ್ತಿಯನ್ನ ಕೆಳಗೆ ಎಸೆದು, ಅಲಂಕಾರಕ್ಕೆ ಬಳಸಿದ್ದ ಹೂವನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ.
ಇದನ್ನೂ ಓದಿ : ಎಲ್ಲರ ವಿಘ್ಞ ಕಳೆಯುವ ಗಣೇಶನ ಪೂಜೆಗೆ ವಿಘ್ನವಾಗುತ್ತಿರುವ ಪೋಲಿಸರು
ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ಈ ಕೃತ್ಯಕ್ಕೆ ಹಿರೇಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.