ಆದ್ರೂ ದೋಸ್ತಿಗಳಿಗೆ ಢವ ಢವ!
ಪಟ್ಟಕ್ಕಾಗಿ ದಳಪತಿಗಳ ಪಟ್ಟು!
ಕಲಬುರಗಿ: ಪಾಲಿಕೆ ಫಲಿತಾಂಶ ಅತಂತ್ರವಾಗಿರುವ ಕಾರಣ ಕಲಬುರಗಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಬಹುತೇಕ ಪಕ್ಕಾ ಎನ್ನಲಾಗಿದೆ. ಆದ್ರೂ ದೋಸ್ತಿಗಳಿಗೆ ಬಿಜೆಪಿಯ ಆಪರೇಷನ್ ಕಮಲದ ಭೀತಿ ಎದುರಾಗಿದ್ದು, ಗೆದ್ದ ಅಭ್ಯರ್ಥಿಗಳನ್ನು ರಕ್ಷಿಸಿಕೊಳ್ಳಲು ತೊಡಗಿದ್ದಾರೆ ಎನ್ನಲಾಗಿದೆ.
ನಾಲ್ಕು ಸ್ಥಾನ ಗೆದ್ದಿರುವ ಜೆಡಿಎಸ್ ಮೇಯರ್ ಪಟ್ಟಕ್ಕಾಗಿ ಪಟ್ಟು ಹಿಡಿದಿದೆ ಎನ್ನಲಾಗಿದೆ. ಇತ್ತ ಅಧಿಕಾರ ಹಿಡಿಯಲು ನಾಲ್ಕು ಸ್ಥಾನಗಳ ಕೊರತೆಯನ್ನು ಬಿಜೆಪಿ ಎದುರಿಸುತ್ತಿದೆ. ಇನ್ನೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಂತರವಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಏನೆಲ್ಲ ಆಗುತ್ತೆ ಅನ್ನೋದನ್ನ ದೇವೇಗೌಡರಿಗೆ ಮಲ್ಲಿಕಾರ್ಜುನ ಖರ್ಗೆ ಮನವರಿಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕುರಿತು ಸೋಮವಾರ ಅಧಿಕೃತ ಮಾಹಿತಿ ಹೊರ ಬೀಳುವ ಸಾಧ್ಯತೆಗಳಿವೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಲ್ಲ ತಂತ್ರಗಳನ್ನು ಪ್ರಯೋಗಿಸಿ ಕಲಬುರಗಿಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಆಪರೇಷನ್ ಕಮಲದ ಭೀತಿ ಎದುರಾಗಿದೆ. ಇದನ್ನೂ ಓದಿ: ಕುತೂಹಲ ಮೂಡಿಸಿದ ಗೌತಮ್ ಗಂಭೀರ್ ಟ್ವೀಟ್