ಬೆಂಗಳೂರು: ಗೋವಿಂದರಾಜನಗರ ವಿಧಾನಸಭೆ ಕ್ಷೇತ್ರದಲ್ಲಿನ ಜಿಕೆಡಬ್ಲು ಲೇಔಟ್ ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಸೆಂಟರ್ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ವಹಿಸಿದ್ದರು.
ಗೋವಿಂದರಾಜನಗರ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಯಾಲಿಸಿಸ್ ಕೇಂದ್ರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮತ್ತು ಸ್ಕೇಟಿಂಗ್ ಪಥ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಲೋಕಾರ್ಪಣೆಯಾಗಲಿವೆ.#SangolliRayanna #nammagovindarajanagara pic.twitter.com/2mo0HZVAHN
— V. Somanna (@VSOMANNA_BJP) September 11, 2021
ಸಮಾರಂಭದ ಅಧ್ಯಕ್ಷತೆಯನ್ನು ವಸತಿ ಸಚಿವರಾದ ಶ್ರೀ ವಿ. ಸೋಮಣ್ಣ ವಹಿಸಿದ್ದರು. ಕಂದಾಯ ಸಚಿವರಾದ ಆರ್ ಅಶೋಕ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ(ಬೈರತಿ), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಸುಧಾಕರ್, ತೋಟಗಾರಿಕೆ ಸಚಿವರಾದ ಮುನಿರತ್ನ, ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಮತ್ತು ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಭವಾನಿಪುರ ಬೈ ಎಲೆಕ್ಷನ್ – ದೀದಿ ವಿರುದ್ಧ ಕಣಕ್ಕಿಳಿದಿರುವ ಪ್ರಿಯಾಂಕಾ ನಾಳೆ ನಾಮಪತ್ರ ಸಲ್ಲಿಕೆ