- ಯಾರಿಗೆ ಬೆಂಬಲ?
ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿದ್ದು, ಅಧಿಕಾರದ ಗದ್ದುಗೆ ಯಾರಿಗೆ ಅನ್ನೋ ಪ್ರಶ್ನೆ ಎದುರಾಗಿದೆ. ಇತ್ತ ನಾಲ್ಕೇ ಸ್ಥಾನ ಗೆದ್ದಿದ್ರೂ ಜೆಡಿಎಸ್ ಮೇಯರ್ ಪಟ್ಟ ಪಡೆಯಲು ಹೊಸ ದಾಳ ಉರುಳಿಸಿದೆ. ಇನ್ನೂ ಅತಿ ಹೆಚ್ಚು ವಾರ್ಡ್ ಗಳಲ್ಲಿ ಗೆದ್ದಿರುವ ಕಾಂಗ್ರೆಸ್ ಮತ್ತು ಬಿಜೆಪಿಗೆ ದಳಪತಿಗಳ ಬೆಂಬಲ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.

ಕಲಬುರಗಿಯನ್ನು ರಾಜ್ಯಸಭೆ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಭದ್ರಕೋಟೆ ಎನ್ನಲಾಗುತ್ತಿದೆ. ಪಾಲಿಕೆ ಚುನಾವಣೆ ಉಸ್ತುವಾರಿಯನ್ನು ಸಹ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ತೆಗೆದುಕೊಂಡಿದ್ದರು. ಹಾಗಾಗಿ ಶತಾಗತಯವಾಗಿ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಪ್ರಯತ್ನಕ್ಕೆ ಮುಂದಾಗಿದೆ.

ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡರ ಜೊತೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇತ್ತ ಮೊದಲ ಎರಡೂವರೆ ವರ್ಷ ತಮಗೆ ಮೇಯರ್ ಸ್ಥಾನ ನೀಡಬೇಕೆಂದು ಡಿಮ್ಯಾಂಡ್ ಮಾಡಿದೆ ಎನ್ನಲಾಗಿದೆ. ಹೀಗಾಗಿ ತಮ್ಮ ಷರತ್ತು ಒಪ್ಪಿದ್ರೆ ಮಾತ್ರ ಮೈತ್ರಿ ಎಂದು ಹೇಳಿದೆ. ಹಾಗಾಗಿ ಎರಡೂ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ: ಕಲ್ಬುರ್ಗಿ ಮಹಾನಗರ ಪಾಲಿಕೆ ಕುರ್ಚಿ – ಖರ್ಗೆ ಮತ್ತು ಎಚ್‌ಡಿಡಿ ಮಾತುಕತೆ