ಕೋಲ್ಕತ್ತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಬ್ರೂವಾಲ್ ಅವರು ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಸೆಪ್ಟೆಂಬರ್ 30ರಂದು ಭವಾನಿಪುರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈಗಾಗಲೇ ಮಮತಾ ಬ್ಯಾನರ್ಜಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ದೀದಿ ವಿರುದ್ಧ ಕಣಕ್ಕಿಳಿಯುತ್ತಿರುವ ಪ್ರಿಯಾಂಕಾ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಜನರಿಗೆ ಬದುಕುವ ಹಕ್ಕಿದೆ. ಆದರೆ ಈ ಹಕ್ಕನ್ನು ಮಮತಾ ಬ್ಯಾನರ್ಜಿ ಮತ್ತು ಅವರ ಪಕ್ಷ ಕಸಿದುಕೊಳ್ಳುತ್ತಿದೆ ಎಂದು ಚುನಾವಣೋತ್ತರ ಹಿಂಸೆ ಕುರಿತು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಟಿಎಂಸಿ ಹಿಂಸೆಯನ್ನು ಬೆಂಬಲಿಸುವುದರಿಂದ ಚುನಾವಣೆಯನ್ನು ಪಾರದರ್ಶಕತೆಯಿಂದ ನಡೆಸಲು ಸಾಧ್ಯವಾಗುವುದಿಲ್ಲ. ನನ್ನ ಹೋರಾಟವು ಆಡಳಿತ ಪಕ್ಷದ ಸದಸ್ಯರ ವಿರುದ್ಧವಾಗಿದೆ. ಏಕೆಂದರೆ ಅವರು ಪಶ್ಚಿಮ ಬಂಗಾಳದ ಜನರಿಗೆ ಅನ್ಯಾಯ ಮಾಡಿದ್ದಾರೆ ಎಂದು ಪ್ರಿಯಾಂಕಾ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Delhi Rain : ಜಲಾವೃತಗೊಂಡ ಸ್ಥಳದಲ್ಲೆ ಪ್ರತಿಭಟನೆ – ಮಳೆ, ಚಳಿ, ಬಿಸಿಲಿಗೆ ಬೆದರದ ಅನ್ನದಾತರು

ಮಮತಾ ಬ್ಯಾನರ್ಜಿ ಭವಾನಿಪುರದ ನಿವಾಸಿಯಾಗಿದ್ದು, 2011 ಮತ್ತು 2016ರಲ್ಲಿ ಎರಡು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಈ ವರ್ಷದ ಏಪ್ರಿಲ್-ಮೇ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮದಿಂದ ಬಿಜೆಪಿ ನಾಯಕ ಮತ್ತು ಅವರ ಮಾಜಿ ಆಪ್ತರಾದ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಸೋತಿದ್ದರು. ನಂದಿಗ್ರಾಮ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಈ ಉಪಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸೆಪ್ಟೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 03ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಹಿಂದೂ ದೇವಾಲಯಗಳೇ ಟಾರ್ಗೆಟ್ ಏಕೆ? ಚರ್ಚ್, ಮಸೀದಿ ಕಾಣಲ್ವಾ?: ಪ್ರತಾಪ್ ಸಿಂಹ