ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಬಿ ಬಿ ಎಂ ಪಿ ಯಿಂದ ನಿರ್ಮಿಸಿರುವ 160 ಅಡಿ ಕಾರಂಜಿಯನ್ನು ಉದ್ಘಾಟಿಸಿದರು. ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘವತಿಯಿಂಧ ನಿರ್ಮಿಸಿರುವ ಇಂಜಿನಿಯರಿಂಗ್ ಭವನ, ಇಂಜಿನಿಯರ್ ತರಬೇತಿ ಕೇಂದ್ರವನ್ನು ಲೋಕಾರ್ಪಣೆ ಮಾಡಿ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ್, ಶಾಸಕ ರಿಜ್ವಾನ್ ಅರ್ಶದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಬಿ ಬಿ ಎಂಪಿ ಆಯುಕ್ತ ಗೌರವ್ ಗುಪ್ತಾ, ಸಂಸ್ಥೆಯ ಅಧ್ಯಕ್ಸ ಪೀತಂಬರ ಸ್ವಾಮಿ ಉಪಸ್ಥಿತರಿದ್ದರು.
ಇದನ್ನೂ ಓದಿ : ICAI Final Exams – Ruth D’Silva : ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಮೊದಲ Rank ಪಡೆದ ಮಂಗಳೂರು ಕುವರಿ