ದಾವಣಗೆರೆ: ಪ್ರಜಾಪ್ರಭುತ್ವದ ಯಶಸ್ವಿಗೆ ಸಂಘಟನೆ ಮುಖ್ಯ. ಆ ಸಂಘಟನೆಗೆ ನಾಯಕತ್ವ ಅತಿ ಮುಖ್ಯವಾಗಿರುತ್ತದೆ. ಅಂತಹ ಸಂಘಟನೆ ಕಟ್ಟಿದ ಏಕೈಕ ಪಕ್ಷ ಬಿಜೆಪಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಲ್ಲಿನ ತ್ರಿಶೂಲ್ ಭವನದಲ್ಲಿ ಹಮ್ಮಿಕೊಂಡಿತರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಕಾರಣ ಇಂದು ದೇಶವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಮಾಡಲಾಗಿತ್ತದೆ ಎಂದು ಹೇಳಿದ್ದಾರೆ.

ಈ ಸಭೆಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರದ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ,ಸದಾನಂದಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಮಹತ್ವ ಪಡೆದ ಕಾರ್ಯಕಾರಣಿ ಸಭೆ
ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದು ಹಾಗೂ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಸಿದ್ಧತೆ ಉದ್ದೇಶದಿಂದ ಈ ಕಾರ್ಯಕಾರಣಿ ಸಭೆ ಆಯೋಜಿಸಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.