ಬೆಂಗಳೂರು : ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರದು(D. V. Sadananda Gowda) ಎನ್ನಲಾದ ಅಶ್ಲೀಲ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಬಿಡುಗಡೆಯಾಗಿದ್ದು ಭಾರಿ ವೈರಲ್ ಆಗುತ್ತಿದೆ. ಇಂದು ಮಧ್ಯಾಹ್ನದಿಂದಲೇ ಈ ವಿಡಿಯೋ ವ್ಯಾಟ್ಸಪ್ ಮತ್ತು ಫೇಸ್‌ಬುಕ್ ಸೇರಿ ಇತರೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ವೀಡಿಯೋ ಸಂಬಂಧ ಸರಣಿ ಟ್ವಿಟ್ ಮಾಡುವ ಮೂಲಕ ಡಿ.ವಿ ಸದಾನಂದಗೌಡರು ಪ್ರತಿಕ್ರಿಯೆ ನೀಡಿದ್ದು ವಿಡಿಯೋದಲ್ಲಿರುವುದು ನಾನಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ. ನನ್ನ ವಿರೋಧಿಗಳಿಂದ ನಕಲಿ ವಿಡಿಯೋ ಸೃಷ್ಟಿಸಲಾಗಿದ್ದು ನನ್ನ ಹೆಸರು ಹಾಳು ಮಾಡುವ ಉದ್ದೇಶ ಇದಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ನಾನು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದು, ಅಪರಾಧಗಳನ್ನು ಶೀಘ್ರವಾಗಿ ಬಂಧಿಸುವ ನಂಬಿಕೆ ಇದೆ ಎಂದು ಡಿ.ವಿ ಸದಾನಂದಗೌಡ ಟ್ವಿಟ್ ಮಾಡಿದ್ದಾರೆ.
ನಾನು ಈಗಾಗಲೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇನೆ. ನನಗೆ ನಂಬಿಕೆ ಇದೆ, ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು. ಅಲ್ಲದೇ, ನಾನು ನ್ಯಾಯಾಲಯದ ತಡೆಯಾಜ್ಞೆಯ ಪ್ರಕಾರ, ವಿಷಯವನ್ನು ಫಾರ್ವರ್ಡ್ ಮಾಡುವ/ಅಪ್‌ಲೋಡ್ ಮಾಡುವ ಯಾರಾದರೂ ಕಾನೂನಿನ ಸಂಬಂಧಿತ ವಿಭಾಗಗಳ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. 2/3
— Sadananda Gowda (@DVSadanandGowda) September 19, 2021
ಕೋರ್ಟ್ ನಿಂದ ತಡೆಯಾಜ್ಞೆ ಇರುವ ಕಾರಣ ವಿಡಿಯೋ ವಿಡಿಯೋ ಶೇರ್ ಮಾಡುವ ಅಥಾವ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದು ಶಿಕ್ಷಾರ್ಹ ಅಪರಾಧ, ಈ ರೀತಿಯ ಬೆಳವಣಿಗೆ ಕಂಡು ಬಂದರೆ ತಮ್ಮಗೆ ತಿಳಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.