ಬೆಂಗಳೂರು : ಖಾಸಗಿ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕಳೆದ ಆಗಸ್ಟ್-ಸೆಪ್ಟಂಬರ್‌ನಲ್ಲಿ ನಡೆಸಲಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ.
ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಇದಾಗಿದೆ. ಒಟ್ಟು 18 414 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

18,414 ವಿದ್ಯಾರ್ಥಿಗಳ ಪೈಕಿ 5,507 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 12,906 ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 556 ಪ್ರೆಶರ್ಸ್, 183 ರಿಪೀಟರ್ಸ್ ಪಾಸ್ ಆಗಿದ್ದಾರೆ. 17,470 ಖಾಸಗಿ ವಿದ್ಯಾರ್ಥಿಗಳ ಪೈಕಿ 4,768 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 600ಕ್ಕೆ 573 ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ 600 ಅಂಕಕ್ಕೆ 592 ಅತಿ ಹೆಚ್ಚು ಅಂಕ ಪಡೆದಿದ್ದರೆ, ವಾಣಿಜ್ಯ ವಿಭಾಗದಲ್ಲಿ 600ಕ್ಕೆ 594 ಅತಿ ಹೆಚ್ಚು ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳು kea.kar.nic.in ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶ ವೀಕ್ಷಿಸಬಹುದಾಗಿದೆ

ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಅಭ್ಯರ್ಥಿಗಳನ್ನು ಹೊರತುಪಡಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಎಲ್ಲ ವಿದ್ಯಾರ್ಥಿಗಳ SSLC ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಉತ್ತೀರ್ಣ ಮಾಡಲಾಗಿತ್ತು. ಆದರೆ ಖಾಸಗಿ ಅಭ್ಯರ್ಥಿಗಳ ಪರೀಕ್ಷೆಯನ್ನು ನಡೆಸಲಾಗಿತ್ತು.
17470 ಮಂದಿ ಖಾಸಗಿ ಅಭ್ಯರ್ಥಿಗಳ ಜತೆಗೆ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯು ಫಲಿತಾಂಶ ಆಧರಿಸಿ ನೀಡಿದ ಫಲಿತಾಂಶ ರದ್ದುಪಡಿಸಿಕೊಂಡಿದ್ದ 592 ಅಭ್ಯರ್ಥಿಗಳೂ ಸೇರಿ ಒಟ್ಟು 18,413 ಮಂದಿಗೆ ಕಳೆದ ಆ.19ರಿಂದ ಸೆ.3ರ ವರೆಗೆ ಪರೀಕ್ಷೆ ನಡೆದಿತ್ತು