ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಸಚಿವ ಅಶ್ವತ್ಥನಾರಾಯಣ ಇಂದು ಪ್ರಕಟಿಸಿದ್ದಾರೆ. ಆ. 28, 29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆದಿತ್ತು.

ಉನ್ನತ ಶಿಕ್ಷಣ ಇಲಾಖೆ ಸಚಿವ ಅಶ್ವತ್ಥ ನಾರಾಯಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಮೈಸೂರಿನ ಪ್ರಮಾತಿ ವಿವ್ಯೂ ಅಕಾಡೆಮಿಯ ಮೇಘನ್ ಹೆಚ್ಕೆ ಎಂಬ ವಿದ್ಯಾರ್ಥಿ ಈ ಬಾರಿಯ ಸಿಇಟಿಯಲ್ಲಿ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಇಂಜಿನಿಯರಿಂಗ್, ಆಗ್ರಿಕ್ಚರ್, ಪಶುಸಂಗೋಪನೆ, ಬಿ ಫಾರ್ಮಾ, ಯೋಗ ನ್ಯಾಚುರಾಪತಿಯಲ್ಲೂ ಮೊದಲ ರ್ಯಾಂಕ್ ಪಡೆದುಕೊಂಡಿದ್ದಾನೆ.
ಇದನ್ನೂ ಓದಿ : Second puc result 2021; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ರಾಜ್ಯಾದ್ಯಂತ 530 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 2,01,834 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 1,93,447 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕೋವಿಡ್ ಪಾಸಿಟಿವ್ ಇದ್ದ 12 ಅಭ್ಯರ್ಥಿಗಳು ಕೂಡ ಹಾಜರಾಗಿ ಪರೀಕ್ಷೆ ಬರೆದಿದ್ದರು.
ಫಲಿತಾಂಶಕ್ಕಾಗಿ ಪ್ರಾಧಿಕಾರದ ವೆಬ್ಸೈಟ್ kea.Kar.nic.in ಹಾಗೂ karresults.nic.in ಗಳಿಗೆ ಭೇಟಿ ನೀಡಿ ಫಲಿತಾಂಶ ನೋಡಬಹುದಾಗಿದೆ.