ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಆರಂಭವಾಗಿದೆ. ಇನ್ನೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರ ತನಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮೂನ್ಸೂಚನೆ ನೀಡಿದೆ.
ಇದನ್ನೂ ಓದಿ : Aadhar Card : ನಿಮ್ಮ ಆಧಾರ್ ಮಾಹಿತಿ ಬಳಸಿ ಯಾರಾದರೂ ಸಿಮ್ ಕಾರ್ಡ್ ಉಪಯೋಗಿಸುತ್ತಿದ್ದಾರೆಯೇ?
ಇಂದು ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಕೊಡಗು, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಮೂನ್ಸೂಚನೆ ನೀಡಿದೆ.

ಸದ್ಯ ರಾಜ್ಯದಲ್ಲಿ ಈ ತಿಂಗಳ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅರ್ಭಟ ಹೆಚ್ಚಾಗಿತ್ತು. ಸೆಪ್ಟೆಂಬರ್ ತಿಂಗಳ ಅಂತ್ಯದ ತನಕ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.