ಬೆಂಗಳೂರು : ಖ್ಯಾತ ಬಾಲಿವುಡ್ ನಟ ಕುನಾಲ್ ಕಪೂರ್ ಮಾರತ್ ಹಳ್ಳಿಯ, ರೈನ್ ಬೋ ಮಕ್ಕಳ ಆಸ್ಪತ್ರೆ, ಕರ್ನಾಟಕದ ಮೊದಲ ವಿಶೇಷ ಕ್ಯಾನ್ಸರ್ ಕೇಂದ್ರಕ್ಕೆ ಚಾಲನೆ ನೀಡಿದರು. ಇಲ್ಲಿ ಮಕ್ಕಳಿಗೆ ಎಲ್ಲಾ ರೀತಿಯ ಕ್ಯಾನ್ಸರ್ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯಲಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನ ಈ ಮೂಲಕ ಪರಿಚಯಿಸುತ್ತಿದೆ.

ಈ ಕುರಿತಂತೆ ಮಾತನಾಡಿದ ಬಾಲಿವುಡ್ ನಟ ಕುನಾಲ್ ಕಪೂರ್ “ಈ ಕೇಂದ್ರಕ್ಕೆ ಚಾಲನೆ ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ, ಮಕ್ಕಳ ಆರೋಗ್ಯದೆಡೆಗಿನ ರೈನ್ ಬೋ ಮಕ್ಕಳ ಆಸ್ಪತ್ರೆಯ ಅತೀವ ಕಾಳಜಿಗೆ ಆರೋಗ್ಯ ಕ್ಷೇತ್ರದಲ್ಲಿ ಅವರು ನೀಡುತ್ತಿರುವ ಸೌಲಭ್ಯಗಳೆ ಸಾಕ್ಷಿಯಾಗಿವೆ. ಇತ್ತೀಚಿನ ದಿನಗಳಲ್ಲಿ ಮಕ್ಕಳ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿದ್ದು, ಆರಂಭದಲ್ಲಿಯೇ ಈ ಮಾರಕ ಕಾಯಿಲೆಗೆ ಪರಿಣಾಮಕಾರಿ ಅತ್ಯಾಧುನಿಕ ಚಿಕಿತ್ಸೆ ನೀಡಲು ರೈನ್ ಬೋ ಮಕ್ಕಳ ಆಸ್ಪತ್ರೆಯು ನಿರ್ಧರಿಸಿ ಅತ್ಯುತ್ತಮ ಕೇಂದ್ರ ಆರಂಭಿಸಿರುವುದು ನಿಜಕ್ಕೂ ಅತ್ಯುತ್ತಮ ಕ್ರಮವಾಗಿದೆ”. ಎಂದರು.
ಇದನ್ನೂ ಓದಿ : ‘YouTube ನನಗೆ ತಿಂಗಳಿಗೆ 4 ಲಕ್ಷ ರೂ.ಗಳನ್ನು ಕೊಡುತ್ತಿದೆ’ ಕೇಂದ್ರ ಸಚಿವ Nitin Gadkari
ಹಾಗೆಯೇ ಹೆಚ್ಚುತ್ತಿರುವ ಮಕ್ಕಳಲ್ಲಿನ ಕ್ಯಾನ್ಸರ್ ಪ್ರಕರಣಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹತ್ತು ಹಲವು ರೀತಿಯ ಕಾರ್ಯಕ್ರಮಗಳನ್ನು ಕೂಡಾ ಮುಂದಿನ ದಿನಗಳಲ್ಲಿ ಆಯೋಜಿಸಲಿದೆ. ಈ ಕುರಿತಂತೆ ಮಾತನಾಡಿದ ರೈನ್ ಬೋ ಮಕ್ಕಳ ಆಸ್ಪತ್ರೆಯ ಉಪಾಧ್ಯಕ್ಷ ಮತ್ತು ಕ್ಲಸ್ಟರ್ ಹೆಡ್ ಅಕ್ಷಯ್ ಒಲೆಟಿ,”ರೈನ್ ಬೋ ಮಕ್ಕಳ ಆಸ್ಪತ್ರೆಯು ಮಕ್ಕಳಲ್ಲಿನ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ. ಪ್ರಸ್ತುತ ವಿಶ್ವ ದರ್ಜೆಯ ಸೌಲಭ್ಯಗಳನ್ನೊಳಗೊಂಡ ಕ್ಯಾನ್ಸರ್ ಕೇಂದ್ರವನ್ನ ಆರಂಬಿಸುತ್ತಿರುವುದಕ್ಕೆ ನಮಗೆ ಅತೀವ ಸಂತೋಷವಾಗಿದೆ. ನಮ್ಮ ಆಸ್ಪತ್ರೆಗೆ ಈ ಕೇಂದ್ರವು ಮತ್ತೊಂದು ಹೆಮ್ಮೆಯ ಸಂಗತಿ ಎಂದು ಹೇಳಲು ನನಗೆ ಸಂತಸವಾಗುತ್ತಿದೆ.
ಮಾರತ್ ಹಳ್ಳಿ ರೈನ್ ಬೋ ಮಕ್ಕಳ ಆಸ್ಪತ್ರೆಯ ಕ್ಯಾನ್ಸರ್ ತಜ್ಞೆ ಡಾ ವಸುಧಾ ಎನ್ ರಾವ್,”ವರ್ಷಕ್ಕೆ 19 ವರ್ಷದೊಳಗಿನ ಸುಮಾರು 70 ಸಾವಿರ ಮಕ್ಕಳು ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಾರೆ ಎಂದು ಅಂದಾಜಿಸಲಾಗುತ್ತದೆ. ಈ ಮಕ್ಕಳು ಎದುರಿಸುವ ಸಮಸ್ಯೆಯೆಂದರೆ ಸೂಕ್ತ ಸಮಯಕ್ಕೆ ಹಾಗೂ ಸರಿಯಾದ ಚಿಕಿತ್ಸೆ ಸಿಗುವಲ್ಲಿ ಸಾಕಷ್ಟು ಅಡೆತಡೆಗಳನ್ನ ಎದುರಿಸಬೇಕಾಗುತ್ತದೆ. ಅದೆಲ್ಲವನ್ನು ಹೋಗಲಾಡಿಸುವ ಕಾರಣಕ್ಕೆ ರೈನ್ ಬೋ ಮಕ್ಕಳ ಆಸ್ಪತ್ರೆಯು ಈ ಅತ್ಯಾಧುನಿಕ ವಿಶೇಷ ಸೌಲಭ್ಯಗಳನ್ನೊಳಗೊಂಡ ಕ್ಯಾನ್ಸರ್ ಕೇಂದ್ರ ಆರಂಭಿಸಿದೆ. ಎಂದು ಹೇಳಿದರು.