ಬೆಂಗಳೂರು: ಬಿಎಸ್ಎಫ್ ಕ್ಯಾಂಪ್‌ನ 70 ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಾರಹಳ್ಳಿಯ BSF ಕ್ಯಾಂಪ್ ನಲ್ಲಿ ಮೇಘಾಲಯದಿಂದ ಬಂದಿದ್ದ 70 ಯೋಧರಿಗೆ ಕೊರೊನಾ ತಗುಲಿದೆ.

ಕಳೆದ 11 ರಂದು ಮೇಘಾಲಯದಿಂದ ಬೆಂಗಳೂರಿನ ಬಿಎಸ್ಎಪ್ ಕ್ಯಾಂಪ್ ಗೆ ಈ ಯೋಧರೆಲ್ಲರೂ ಬಂದಿದ್ದರು. ಮೊದಲು 34 ಯೋಧರಲ್ಲಿ ಸೋಂಕು ದೃಢಪಟ್ಟಿತ್ತು. ಮತ್ತೆ 36 ಯೋಧರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 70 ಯೋಧರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು , ಒಬ್ಬ ಯೋಧನಿಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಬಿಎಸ್ಎಫ್ ಟ್ರೈನಿಂಗ್ ಕ್ವಾಟರ್ಸ್ ನಲ್ಲಿ ಉಳಿದುಕೊಂಡಿದ್ದ 365 ಯೋಧರಿಗೆ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿತ್ತು.

ಈ ಕ್ಯಾಂಪ್ ನಲ್ಲಿ 1800 ಜನ ಯೋಧರು ಮತ್ತು ಅವರ ಕುಟುಂಬಸ್ಥರಿದ್ದಾರೆ. ಸದ್ಯ 400 ಮಂದಿಯ ಟೆಸ್ಟ್ ಪೂರ್ಣಗೊಂಡಿದೆ. ಇನ್ನೂ 1400 ಜನರ ಕೊರೊನಾ ಟೇಸ್ಟ್ ಇಂದು ಮತ್ತು ನಾಳೆ ಮಾಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಇದನ್ನೂ ಓದಿ : Tourism Update : ನೀಲಕುರಂಜಿ ವೀಕ್ಷಣೆಗೆ ಹರಿದು ಬರುತ್ತಿದೆ ಪ್ರವಾಸಿಗರ ದಂಡು
ಒರ್ವ ಯೋಧನ ಸ್ಥಿತಿ ಗಂಭೀರ ಹಿನ್ನಲೆ ಐಸಿಯು ನಲ್ಲಿ ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಆದ್ರೆ ಹೆಚ್ಚಿನ ಚಿಕಿತ್ಸೆ ಅಗತ್ಯ ಇರೋ ಹಿನ್ನಲೆ ಇಂದಿ ನಗರದ ಆಸ್ಪತ್ರೆಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.