ಬೆಂಗಳೂರು: ನಗರದಲ್ಲಿ ಮತ್ತೊಂದು ಸಿಲಿಂಡರ್ ( Gas Cylinder ) ಸ್ಪೋಟಗೊಂಡಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಬ್ಲಾಸ್ಟ್ ತೀವ್ರತೆಗೆ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ್ದು, ಅವರ ದೇಹಗಳ ಛಿದ್ರವಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಯವರಿಗೂ ಗಂಭೀರ ಗಾಯಗಾಳಾಗಿದ್ದು, ಹತ್ತಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಕರಕಲಾಗಿವೆ. ವಿವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಗಢ ಸಂಭವಿಸಿದ್ದು ಸ್ಥಳಕ್ಕೆ ಚಾಮರಾಜಪೇಟೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಸ್ಫೋಟಕ್ಕೆ ಕಾರಣ ಏನು ಎಂಬುದರ ತನಿಖೆ ನಡೆಯುತ್ತಿದ್ದು, ಇದ್ದು ಗಾಯಗೊಂಡವನರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿವೆ.

ಕಳೆದ ಎರಡು ದಿನಗಳ ಹಿಂದೆ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ಮೆಂಟ್ ಬಳಿ ನಡೆದಿದ್ದ ಅಗ್ನಿ ಅವಗಢ ಈಡೀ ಬೆಂಗಳೂರನ್ನೆ ಬೆಚ್ಚಿ ಬೀಳಿಸಿತ್ತು.. ಈ ಅವಗಢ ಮಾಸುವ ಮುನ್ನವೇ ಮತ್ತೊಂದು ಸಿಲಿಂಡರ್ ಬ್ಲಾಸ್ಟ್ ಆಗಿರೋದು ಬೆಂಗಳೂರಿಗರ ಆತಂಕಕ್ಕೆ ಕಾರಣವಾಗಿದೆ.