ಬೆಂಗಳೂರು : ಕರ್ನಾಟಕ ಸರ್ಕಾರ ರಾಜ್ಯದ ಚಿತ್ರಮಂದಿರಗಳಿಗೆ ಶೇ100 ಆಸನಕ್ಕೆ ಅವಕಾಶ ನೀಡಿದೆ. ಕೊರೊನ ಸಂಕಷ್ಟದ ಹಿನ್ನೆಲೆ ರಾಜ್ಯದ ಎಲ್ಲ ಚಿತ್ರ ಮಂದಿರಗಳಲ್ಲಿ ಶೇ 50 ಆಸನ ನಿರ್ಬಂಧ ವಿಧಿಸಿದ್ದ ಸರ್ಕಾರ ಇಂದು ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಈ ಮೂಲಕ ಸಂಕಷ್ಟದಲ್ಲಿದ್ದ ಸಾವಿರಾರು ಚಿತ್ರೋದ್ಯಮ ಕಲಾವಿದರು ನಿರ್ಮಾಪಕರುಗಳು ಮತ್ತು ಸಿನಿ ರಸಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಇನ್ನು ಮುಂದೆ ರಾಜ್ಯದಲ್ಲಿ ಶೇ 1 ಕ್ಕಿಂತ ಕಡಿಮೆ ಪಾಸಿಟಿವ್ ರೇಟ್ ಇರುವಂತಹ ನಗರಗಳಲ್ಲಿ ಚಿತ್ರಮಂದಿರಗಳು ಶೇ100 ಆಸನ ವ್ಯವಸ್ಥೆಗೆ ಅವಕಾಶ ನೀಡಿದೆ. ಶೇ2 ರಷ್ಟು ಪಾಸಿಟಿವಿಟಿ ದರ ಕಂಡುಬಂದಲ್ಲಿ ಈ ನಿಯಮಗಳನ್ನು ಹಿಂಪಡೆಯಲಾಗುವುದು. ಪ್ರೇಕ್ಷಕರು ಕಡ್ಡಾಯವಾಗಿ ಮೊದಲ ಲಸಿಕೆ ಪಡೆದಿರಬೇಕು ಅಥವಾ ಎರಡು ಡೋಸ್ ಲಸಿಕೆ ಪಡೆದಿರಬೇಕು ಅಂತವರಿಗೆ ಮಾತ್ರ ಚಿತ್ರಮಂದಿರ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ. ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ಇಲ್ಲ.