ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ದತೆ ಜೋರಾಗಿದೆ. ಮುಂದಿನ ತಿಂಗಳು ಅರಮನೆಯಲ್ಲಿ ನಡೆಯುವ ದಸರಾ ಕಾರ್ಯಕ್ರಮ ನಿಗದಿಯಾಗಿದೆ. ಕೊವಿಡ್ ಹಿನ್ನೆಲೆ ಈ ಬಾರಿಯೂ ಜಟ್ಟಿ ಕಾಳಗಕ್ಕೆ ಬ್ರೇಕ್ ಹಾಕಲಾಗಿದೆ.

ಹೌದು ಅಕ್ಟೋಬರ್ 7 ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 7ರಂದು ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಇನ್ನೂ ಅಕ್ಟೋಬರ್ 1 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಮಾಡಲಾಗುವುದು. ಹೋಮ ಹವನ ಗಳು ನಡೆಯಲಿವೆ 1ರಂದು ಅರಮನೆಗೆ ಪ್ರವಾಸಿಗರ ಭೇಟಿ ನಿರ್ಬಂಧಿಸಲಾಗಿದೆ.
ಇನ್ನೂ ಅಕ್ಟೋಬರ್ 14ರಂದು ಅರಮನೆಯಲ್ಲಿ ಆಯುಧ ಪೂಜೆ ನಡೆಯಲಿದೆ. ಬೆಳಗ್ಗೆ 5.30ರಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿವೆ. 7.45ಕ್ಕೆ ರಾಜರ ಆಯುಧಗಳನ್ನು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಮಾಡಲಾಗುವುದು. ಬಳಿಕ ಪೂಜೆ ಸಲ್ಲಿಸಿ ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆ ಕಲ್ಯಾಣ ಮಂಟಪಕ್ಕೆ ತರಲಾಗುವುದು. 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಆಯುಧಗಳಿಗೆ ಪೂಜೆ ನೆರವೇರಿಸಲಾಗುವುದು. ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ರಿಂದ ಪೂಜೆ ನಡೆಯಲಿದೆ.
ಇದನ್ನೂ ಓದಿ : High Court Judges Oath Taking Ceremony : ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ
ಅಕ್ಟೋಬರ್ 15ರಂದು ಅರಮನೆಯಲ್ಲಿ ವಿಜಯ ದಶಮಿ ಆಚರಿಸಲಾಗುವುದು. 5.45ಕ್ಕೆ ಆನೆ, ಕುದುರೆ, ಹಸುಗಳ ಆಗಮನವಾಗಲಿದ್ದು, 6.13 ರಿಂದ 6.32ರವರೆಗೆ ಪೂಜಾ ಕೈಂಕರ್ಯ ನಡೆಯಲಿದೆ. 7.20ರಿಂದ 7.40ರವರೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ. ಅರಮನೆ ಮುಖ್ಯದ್ವಾರದಿಂದ ಅರಮನೆ ಆವರಣ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ದೇಗುಲದ ಬನ್ನಿ ಮರಕ್ಕೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್ ಪೂಜೆ ನಡೆಸಲಿದ್ದಾರೆ. ಪೂಜೆಯ ನಂತರ ಮೆರವಣಿಗೆ ಮೂಲಕ ಅರಮನೆಗೆ ವಾಪಸ್ಸು ಆಗಲಿದ್ದಾರೆ.
ಕೋವಿಡರ ಮಾರ್ಗಸೂಚಿ ಆಧರಿಸಿ ದಸರಾ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ.. ದಸರಾ ಉದ್ಘಾಟಕರ ಹೆಸರ ಇನ್ನೂ ಕೂಡ ತೀರ್ಮಾನವಾಗಿಲ್ಲಾ.