ಬೆಂಗಳೂರು : ಜಾತಿ ಸಮೀಕ್ಷೆ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು ನಾನು ಮುಖ್ಯಮಂತ್ರಿ ಆಗಿದ್ದಾಗ ಜಾತಿ ಸಮೀಕ್ಷೆ ಪೂರ್ಣ ಆಗಿರಲಿಲ್ಲ. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಜಾತಿ ಸಮೀಕ್ಷೆ ಪೂರ್ಣವಾಯ್ತು. ಆದ್ರೆ, ಅದನ್ನು ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ ಎಂದು ಆರೋಪಿಸಿದ್ದಾರೆ.

ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವನಾಗಿದ್ದರು. ವರದಿ ಪೂರ್ಣವಾಗಿದೆ ಎಂದು ನನಗೆ ಮಾಹಿತಿ ನೀಡಿದ್ರು. ಜಾತಿ ಗಣತಿ ಬಿಡುಗಡೆಗೆ ಪುಟ್ಟರಂಗಶೆಟ್ಟಿ ಪ್ರಯತ್ನ ಮಾಡಲು ಹೋಗಿದ್ದರು. ಆದರೆ ಆಗ ಕುಮಾರಸ್ವಾಮಿ ಬಿಡುಗಡೆ ಮಾಡಲಿಲ್ಲ.
ಇದನ್ನೂ ಓದಿ : ಸುಪ್ರೀಂಕೋರ್ಟ್ ಇಮೇಲ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಬಳಕೆಗೆ ಬ್ರೇಕ್
ಪುಟ್ಟರಂಗಶೆಟ್ಟಿಯನ್ನು ಕುಮಾರಸ್ವಾಮಿ ಹೆದರಿಸಿ ಬಿಟ್ಟಿದ್ದರು. ಅವರಿಗೆ ಹೆದರಿ ವರದಿ ಬಿಡುಗಡೆ ಗೋಜಿಗೆ ಹೋಗಲಿಲ್ಲ. ಇದನ್ನು ನಾನು ಹೇಳಿದರೆ ಕುಮಾರಸ್ವಾಮಿಗೆ ಕೋಪ ಬರುತ್ತೆ. ಸಿದ್ದರಾಮಯ್ಯ ಕೂತ್ಕೊಂಡು ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಎಂದು ಟಾಂಗ್ ಕೊಟ್ಟರು.
Siddaramaiah HD Kumaraswami