ತುಮಕೂರು: ಮಾಜಿ ಶಾಸಕ, ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ(B. Suresh Gowda) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರಡ. ಸುರೇಶ್ ಗೌಡ ನಡೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ.
ಹೌದು ತುಮಕೂರು ಬಿಜೆಪಿ ಜಿಲ್ಲಾ ಘಟಕಕ್ಕೆ ಸುರೇಶ್ ಗೌಡ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕವಾಗಿದ್ದಾರೆ.. ಇನ್ನೂ ಅವರ ಅಧಿಕಾರ ಅವಧಿ ಪೂರ್ಣಗೊಳ್ಳಲು ಒಂದೂವರೆ ವರ್ಷ ಬಾಕಿ ಇದ. ಈ ನಡುವೆ ರಾಜೀನಾಮೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

ಸುರೇಶ್ ಗೌಡ ರಾಜೀನಾಮೆ ಕುರಿತು ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದಾರೆ. ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಆದರೆ ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಎಂದು ಬರೆದುಕೊಂಡಿದ್ದಾರೆ.

ಸದ್ಯ ಸುರೇಶ್ ಗೌಡ ಅವರ ಫೇಸ್ಬುಕ್ ಪೋಸ್ಟ್ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಸಕ್ರೀಯವಾಗಲು ರಾಜೀನಾಮೆ ನೀಡಿರಬಹುದು ಎಂಬ ಪ್ರಶ್ನೆ ಹುಟ್ಟು ಹಾಕಿದೆ.. ಆದ್ರೆ ಜಿಲ್ಲಾ ರಾಜಕೀಯ ವಲಯದಲ್ಲಿ ಮಾತ್ರ ಸುರೇಶ್ ಗೌಡರ ರಾಜೀನಾಮೆ ಅಚ್ಚರಿಗೆ ಕಾರಣವಾಗಿದೆ..