ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇಂಜಮಾಮ್-ಉಲ್- ಹಕ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಯಶಸ್ವಿ ಆ್ಯಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಇಂಜಮಾಮ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ಪರೀಕ್ಷೆ ಮಾಡಿ ಬಿಡುಗಡೆ ಮಾಡಲಾಗಿತ್ತು.ಆದ್ರೆ ನಿನ್ನೆ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ರಾತ್ರಿ ಹೆಚ್ಚಿನ ಪರೀಕ್ಷೆಗೆ ಒಳಪಡಿಸಿದಾಗ, ಹೃದಯಾಘಾತಕ್ಕೆ ಒಳಗಾಗಿರುವುದು ದೃಢಪಟ್ಟಿದೆ.

ನಂತರ ಇಂಜಮಾಮ್-ಉಲ್- ಹಕ್ಗೆ ಆ್ಯಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ, ಸದ್ಯ ಇಂಜಮಾಮ್ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಇಂಜಮಾಮ್ ಆದಷ್ಟು ಬೇಗ ಗುಣಮುಖರಾಗಲಿ, ಮತ್ತೆ ಕ್ರಿಕೆಟ್ಗೆ ಸೇವೆ ಸಲ್ಲಿಸುವಂತಾಗಲಿ ಅಂತ ವಿಶ್ವದೆಲ್ಲೆಡೆ ಕ್ರಿಕೆಟ್ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
Inzamam-ul-Haq pakistan cricketer heart attack