ಚಂಡಿಗಡ್ : ಕಳೆದ ಎರಡು ತಿಂಗಳಿನಿಂದ ರಾಜ್ಯದ ರಾಜಕೀಯ ಬೆಳವಣಿಗೆಗಳ ಕೇಂದ್ರ ಸ್ಥಾನದಲ್ಲಿದ್ದ ಪಂಜಾಬ್ ನ ನವಜೋತ್ ಸಿಂಗ್ ಸಿಧು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾದ ಎರಡು ತಿಂಗಳ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಟ್ವೀಟ್ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಧು, ನಾನು ಕಾಂಗ್ರೆಸ್ ನಲ್ಲಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ.
— Navjot Singh Sidhu (@sherryontopp) September 28, 2021
ಈ ಕುರಿತು ಟ್ವೀಟ್ ಮಾಡಿರುವ ಸಿದು, “ಹೊಂದಾಣಿಕೆಯಿಂದ ವ್ಯಕ್ತಿಯ ವ್ಯಕ್ತಿತ್ವ ನಾಶವಾಗುತ್ತದೆ. ಪಂಜಾಬಿನ ಭವಿಷ್ಯ ಮತ್ತು ಪಂಜಾಬಿನ ಕಲ್ಯಾಣದ ಬಗ್ಗೆ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ನಾನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾನು ಕಾಂಗ್ರೆಸ್ ಸೇವೆ ಮುಂದುವರಿಸುತ್ತೇನೆ.” ಎಂದು ಬರೆದುಕೊಂಡಿದ್ದಾರೆ.