ಬೆಂಗಳೂರು: ಲಕ್ಕಸಂದ್ರದ ಮೂರಂತಸ್ತಿನ ಹಳೆಯ ಕಟ್ಟಡ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕ ಸುರೇಶ್ನನ್ನ ಪೊಲೀಸರು ಬಂಧಿಸಿದ್ದಾರೆ.
ಬಿಬಿಎಂಪಿ ನೋಟಿಸ್ ನೀಡಿದ್ರೂ ತೆರವು ಮಾಡದೇ ನಿರ್ಲಕ್ಷ್ಯ ಮಾಡಿದ ಹಿನ್ನೆಲೆ ಸಂಪೂರ್ಣ ಕಟ್ಟಡ ಕುಸಿದುಬಿದ್ದಿತ್ತು. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.
ಇನ್ನೂ ಈ ಸಂಬಂಧ ಮನೆ ಮಾಲೀಕರ ವಿರುದ್ಧ ಬಿಬಿಎಂಪಿ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಿಸಿತ್ತು.. ಕೇಸ್ ದಾಖಲಾಗ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಸುರೇಶ್ನನ್ನ ಇಂದು ಆಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Building collapsed building owner arrest