ಬೆಂಗಳೂರು: ನಗರದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು ಎಂಬ ಖಚಿತ ಮಾಹಿತಿ ಪೋಲಿಸರಿಗೆ ಸಿಕ್ಕಿತ್ತು. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, 5 ಲಕ್ಷವನ್ನು ಜಪ್ತಿ ಮಾಡಲಾಗಿದೆ.

ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪಂದ್ಯ ನಡೆಯುವ ವೇಳೆಯೇ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಸ್ಟೇಷನ್ ನಲ್ಲಿ ಕೇಸ್ ದಾಖಲು ಮಾಡಲಾಗಿದೆ.
Cricket gambling CCB raid arrest