ಬೆಂಗಳೂರು : ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಎಲ್ಲ ವಲಯಗಳ ಜಂಟಿ ಆಯುಕ್ತರು ಹಾಗೂ ಮುಖ್ಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಹಳೆಯ ಕಟ್ಟಡಗಳು ಕುಸಿದು ಬೀಳ್ತಿರೋ ಹಿನ್ನಲೆ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆಗೆ ಬಿಬಿಎಂಪಿ ಮುಂದಾಗಿದೆ.

ಹೌದು ಇದೇ ವಾರದಲ್ಲಿ ಲಕ್ಕಸಂದ್ರ ಹಾಗೂ ಕೆಎಂಎಫ್ ಕ್ವಾಟ್ರಸ್ ನಲ್ಲಿ ಎರಡು ಕಟ್ಟಡಗಳು ಕುಸಿದಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಾ. ಹೀಗಾಗಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮೇಲೆ ನಿಗಾ ಇಡಬೇಕೆಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಎಸ್ಕೇಪ್ ಆಗಿದ್ದ ಮನೆ ಮಾಲೀಕ ಅರೆಸ್ಟ್
ಈ ಹಿಂದೆ ಅಂದರೆ 2019ರಲ್ಲಿ ಸಮೀಕ್ಷೆ ನಡೆಸಿ ಕೆಲವು ಕಟ್ಟಡಗಳನ್ನು ಗುರುತಿಸಲಾಗಿತ್ತು. ಜೊತೆಗೆ ಈಗ ಮತ್ತೊಂದು ಸಮೀಕ್ಷೆಗೆ ಸೂಚನೆ ನೀಡಲಾಗಿದೆ.

ಬಿಬಿಎಂಪಿಯ ಯೋಜನಾ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಿಕೊಂಡು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮರು ಸಮೀಕ್ಷೆ ನಡೆಸಿ 15 ದಿನಗಳೊಳಗೆ ವರದಿ ನೀಡಬೇಕು ಎಂದು ಹೇಳಲಾಗಿದೆ.
ಇದನ್ನೂ ಓದಿ : ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ
ಶಿಥಿಲ ಕಟ್ಟಡಗಳ ಮರು ಸಮೀಕ್ಷೆ ಸಂಬಂಧ ವರ್ಚುವಲ್ ಸಭೆ ನಡೆಸಲಾಗಿದೆ. 2019ರಲ್ಲಿ ನಡೆದ ಸಮೀಕ್ಷೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ 185 ಕಟ್ಟಡಗಳನ್ನು ಗುರುತಿಸಲಾಗಿತ್ತು.. ಇದರಲ್ಲಿ ಕೇವಲ 10 ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ. ಬಾಕಿ ಉಳಿದಿರುವ 175 ಕಟ್ಟಡ ಮಾಲೀಕರಿಗೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ.. ಅಷ್ಟೇ ಅಲ್ಲದೇ ಆ ಕಟ್ಟಡಗಳನ್ನು ನೆಲಸಮ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಆಯಾ ವಲಯಗಳಲ್ಲಿನ ಸಂಬಂಧಪಟ್ಟ ಎಂಜಿನಿಯರ್‌ಗಳು ಶಿಥಿಲ ಕಟ್ಟಡಗಳಿರುವ ಪ್ರದೇಶಕ್ಕೆ ಭೇಟಿ ನೀಡಬೇಕುಮ. ಜೊತೆಗೆ ಮರು ಪರಿಶೀಲನೆ ಮೂಲಕ ನಿಖರ ಮಾಹಿತಿ ಬಿಬಿಎಂಪಿಗೆ ಒದಗಿಸುವಂತೆ ಸೂಚಿಸಲಾಗಿದೆ. ಮರು ಸಮೀಕ್ಷೆಯಲ್ಲಿ ಗುರುತಿಸಿದ ಕಟ್ಟಡಗಳನ್ನು 15 ದಿನಗಳೊಳಗೆ ತೆರವುಗೊಳಿಸಲು ವಲಯವಾರು ಗುತ್ತಿಗೆದಾರರನ್ನು ನೇಮಕ ಮಾಡುತೆಯೂ ಸಭೆಯಲ್ಲಿ ಸೂಚನೆ ನೀಡಲಾಗಿದೆ.
BBMP alert after building collapse old building demolish